ಕಲಬುರಗಿ: ಕೊರೋನ ವೈರಸ್ ಗೆ ಮತ್ತೊಂದು ಬಲಿ

Update: 2020-04-08 07:48 GMT
ಸಾಂದರ್ಭಿಕ ಚಿತ್ರ

ಕಲಬುರಗಿ: ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದ ಕಲಬುರಗಿ 65 ವರ್ಷದ ವೃದ್ಧರೊಬ್ಬರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದ್ದು, ರಾಜ್ಯದಲ್ಲಿ ಕೊರೋನ ದಿಂದ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಎರಡನೇ ವ್ಯಕ್ತಿ ಮೃತಪಟ್ಟಿದ್ದಾರೆ.

ಮೃತರಿಗೆ ಕೊರೋನ ಸೋಂಕು ಇರುವುದು ನಿನ್ನೆ ದೃಢಪಟ್ಟಿದ್ದು. ಕಳೆದ ಎರಡು ತಿಂಗಳಿಂದ ಯಾವುದೇ ಟ್ರಾವೆಲ್ ಹಿಸ್ಟ್ರಿ ಇಲ್ಲ ಎಂದು ತಿಳಿದು ಬಂದಿದೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ನಿನ್ನೆ ರಾತ್ರಿ ಮೃತಪಟ್ಟಿದ್ದಾರೆಂದು ತಿಳಿದುಬಂದೆ.

ಮೃತ ವೃದ್ಧ ಕುಟುಂಬವನ್ನು ಕ್ವಾರೆಂಟೈನ್ ನಲ್ಲಿ ಇಡಲಾಗಿದ್ದು, ಈ ಹಿಂದೆ ಕಲಬುರಗಿಯಲ್ಲಿ 76 ವರ್ಷದ ವೃದ್ಧರೊಬ್ಬರು ಕೊರೋನದಿಂದ ಮೃತಪಟ್ಟಿದ್ದಾರೆ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News