ಕೊರೋನ ವೈರಸ್ ಸೋಂಕು ತಡೆ ಬಗ್ಗೆ ವಿಪಕ್ಷಗಳ ನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ

Update: 2020-04-08 08:49 GMT

ಹೊಸದಿಲ್ಲಿ, ಎ.8: ಕೊರೋನ ವೈರಸ್  ಸೋಂಕು ಹರಡುವಿಕೆಯಿಂದ ಉಂಟಾಗುವ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ  ವಿಪಕ್ಷಗಳ ನಾಯಕರೊಂದಿಗೆ ಬುಧವಾರ ಮಾತುಕತೆ ನಡೆಸಿದರು.

ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ  ಪ್ರಧಾನಿ ಮೋದಿ ಅವರು ವಿಪಕ್ಷಗಳ ನಾಯಕರೊಂದಿಗೆ ಸಭೆ ನಡೆಸಿದರು.   ರಾಜ್ಯಸಭೆಯ ವಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಮತ್ತು ಎನ್ ಸಿಪಿ   ಮುಖ್ಯಸ್ಥ ಶರದ್ ಪವಾರ್    ಮತ್ತಿತರ ನಾಯಕರು ಸಂವಾದದಲ್ಲಿ ಪಾಲ್ಗೊಂಡಿದ್ದರು.

ಮಾರ್ಚ್ 25 ರಂದು ರಾಷ್ಟ್ರವ್ಯಾಪಿ ಲಾಕ್‌ಡೌನ್ ಹೇರಿದ ನಂತರ ವಿಪಕ್ಷಗಳ ನಾಯಕರೊಂದಿಗೆ ಪ್ರಧಾನಮಂತ್ರಿಯವರ ಮೊದಲ ಸಂವಾದ ಇದಾಗಿದೆ, ಆದರೆ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಿದ್ದರು.

ಕೊರೋನ ವೈರಸ್ ಹರಡುವಿಕೆಯನ್ನು ಪರಿಶೀಲಿಸುವ ಮಾರ್ಗಗಳ ಬಗ್ಗೆ ಪ್ರತಿಕ್ರಿಯೆ ಪಡೆಯಲು ಪ್ರಧಾನಿ ವೈದ್ಯರು, ಪತ್ರಕರ್ತರು ಮತ್ತು ಭಾರತೀಯ ನಿಯೋಗದ ಮುಖ್ಯಸ್ಥರು ಸೇರಿದಂತೆ ಹಲವರೊಂದಿಗೆ ಸಂವಹನ ನಡೆಸುತ್ತಿದ್ದಾರೆ.

ಅವರು ಇತ್ತೀಚೆಗೆ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ಡಿಎಂಕೆ ಮುಖಂಡ ಎಂ.ಕೆ.ಸ್ಟಾಲಿನ್ ಸೇರಿದಂತೆ ವಿವಿಧ ನಾಯಕರೊಂದಿಗೆ ಮಾತನಾಡಿದರು ಮತ್ತು ಕೋವಿಡ್ -19  ಪರಿಸ್ಥಿತಿ ಮತ್ತು ಸಾಂಕ್ರಾಮಿಕ ರೋಗ ಹರಡುವಿಕೆಯನ್ನು ತಡೆಗಟ್ಟಲು ಸರ್ಕಾರದ ಪ್ರಯತ್ನಗಳ ಬಗ್ಗೆ ಚರ್ಚಿಸಿದ್ದರು.

ಮಾಜಿ ರಾಷ್ಟ್ರಪತಿಗಳಾದ ಪ್ರತಿಭಾ ಪಾಟೀಲ್ ಮತ್ತು ಪ್ರಣಬ್ ಮುಖರ್ಜಿ, ಮತ್ತು ಮಾಜಿ ಪ್ರಧಾನ ಮಂತ್ರಿಗಳಾದ ಎಚ್.ಡಿ.ದೇವೇಗೌಡ ಮತ್ತು ಮನಮೋಹನ್ ಸಿಂಗ್ ಅವರೊಂದಿಗೆ ಮಾತನಾಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News