ಕಾರ್ಮಿಕರಿಂದ ಬಾಡಿಗೆ ವಸೂಲಿ ಮಾಡಿದಲ್ಲಿ ಪರವಾನಿಗೆ ರದ್ದು: ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್

Update: 2020-04-08 15:59 GMT

ಉಡುಪಿ, ಎ.8: ನೋವೆಲ್ ಕೊರೋನ ವೈರಸ್ (ಕೋವಿಡ್-19) ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಸೆಕ್ಷನ್144(3) ರಂತೆ ನಿಬರ್ಂಧ ವಿಧಿಸಿ ಆದೇಶವನ್ನು ಹೊರಡಿಸಿರುವ ಹಿನ್ನೆಲೆ ಯಲ್ಲಿ ಜಿಲ್ಲೆಯಲ್ಲಿರುವ ಕಾರ್ಮಿಕರ ಶೆಡ್ ಹಾಗೂ ಬಾಡಿಗೆ ಮನೆಗಳಲ್ಲಿ ವಾಸವಿರುವ ಬಾಡಿಗೆದಾರರಿಂದ ಮಾರ್ಚ್, ಎಪ್ರಿಲ್ ಎರಡು ತಿಂಗಳ ಮನೆ/ಶೆಡ್ ಬಾಡಿಗೆಯನ್ನು ಸಂಬಂಧಿತ ಮನೆ ಮಾಲಕರು ವಸೂಲು ಮಾಡದಂತೆ ಜಿಲ್ಲಾಧಿಕಾರಿಗಳು ಮತ್ತೊಮ್ಮೆ ಎಚ್ಚರಿಸಿದ್ದಾರೆ.

ಒಂದು ವೇಳೆ ಯಾರಾದರೂ ಬಾಡಿಗೆ ವಸೂಲಿ ಮಾಡಿದಲ್ಲಿ ಸಂಬಂಧಪಟ್ಟ ಮನೆ ಮಾಲಕರ ವಿರುದ್ದ ಕ್ರಿಮಿನಲ್ ಪ್ರಕರಣವನ್ನು ದಾಖಲಿಸುವು ದಾಗಿಯೂ ಅವರು ಪುನರುಚ್ಛರಿಸಿದ್ದಾರೆ.

ಈ ಮೊದಲೇ ಪತ್ರಿಕಾ ಹೇಳಿಕೆಯ ಮೂಲಕ ಈ ಬಗ್ಗೆ ತಿಳಿಸಿದ್ದರೂ, ಮನೆ/ಶೆಡ್ ಒದಗಿಸಿರುವ ಮನೆ ಮಾಲಕರು ಬಾಡಿಗೆ ಶುಲ್ಕಗಳನ್ನು ವಸೂಲಿ ಮಾಡುತ್ತಿುವ ಬಗ್ಗೆ ದೂರುಗಳು ಬರುತ್ತಿವೆ. ಆದುದರಿಂದ ಈಗಾಗಲೇ ಹೊರಡಿಸಿರುವ ಆದೇಶವನ್ನು ಉಲ್ಲಂಘಿಸಿ ಮನೆ ಬಾಡಿಗೆ ಶುಲ್ಕಗಳನ್ನು ವಸೂಲು ಮಾಡುತ್ತಿರುವ ಶೆಡ್/ಮನೆ ಮಾಲಕರ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿ, ಅವರಿಗೆ ಸ್ಥಳೀಯ ಸಂಸ್ಥೆಗಳ ವತಿಯಿಂದ ನೀಡಲಾಗಿರುವ ಪರವಾನಿಗೆಯನ್ನು ರದ್ದು ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News