ಸಾರಿಗೆ ನೌಕರರ ಒಂದು ದಿನದ ವೇತನ ಸಿಎಂ ಪರಿಹಾರ ನಿಧಿಗೆ
Update: 2020-04-08 22:49 IST
ಬೆಂಗಳೂರು, ಎ.8: ಕೊರೋನ ವೈರಸ್ ಸೋಂಕಿನಿಂದ ಉಂಟಾಗಿರುವ ಸಂಕಷ್ಟವನ್ನ ಎದುರಿಸಲು ಸರಕಾರಕ್ಕೆ ಸಾರಿಗೆ ನೌಕರರ ಸಂಘ ಒಂದು ದಿನದ ಸಂಬಳವನ್ನು ನೀಡಲು ನಿರ್ಧರಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ತಮ್ಮ ಒಂದು ದಿನದ ಸಂಬಳವನ್ನು ಸಿಎಂ ಪರಿಹಾರ ನಿಧಿಗೆ ನೀಡಲು ನಿರ್ಧರಿಸಿದ್ದಾರೆ. ಈ ತಿಂಗಳ 15ರ ಒಳಗೆ ಹಣವನ್ನು ಹಸ್ತಾಂತರ ಮಾಡಲಿದ್ದಾರೆ.