ವಿದೇಶಿ ವಿದ್ಯಾರ್ಥಿಗಳ ಸಹಾಯಕ್ಕಾಗಿ ವೆಬ್‍ಸೈಟ್ ಪ್ರಾರಂಭ

Update: 2020-04-08 18:08 GMT

ಬೆಂಗಳೂರು, ಎ.8: ರಾಜ್ಯದಲ್ಲಿನ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿವಿಧ ದೇಶ ಮತ್ತು ರಾಜ್ಯದ ವಿದ್ಯಾರ್ಥಿಗಳಿಗಾಗಿ www.migrantstudent.in ಎಂಬ ವೆಬ್‍ಸೈಟ್‍ನ್ನು ಅಭಿವೃದ್ದಿ ಪಡಿಸಿದೆ.

ಲಾಕ್‍ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಹಾಸ್ಟೆಲ್‍ಗಳಲ್ಲಿ ಅಥವಾ ಪೇಯಿಂಗ್ ಗೆಸ್ಟ್ ಸೌಲಭ್ಯಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ವಸತಿ, ಆಹಾರ ಸಾಮಗ್ರಿಗಳ ಪೂರೈಕೆ ಹಾಗೂ ವೈದ್ಯಕೀಯ ಸಹಾಯಕ್ಕೆ ಸಂಬಂಧಪಟ್ಟಂತೆ ಉದ್ಭವಿಸಬಹುದಾದ ತೊಂದರೆಗಳ ಪರಿಹಾರಿಸಲು ಜಿಲ್ಲಾ ಮಟ್ಟದಲ್ಲಿ ಸಮಿತಿ ಹಾಗೂ ಜಿಲ್ಲಾ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ 82775-73373, 80955-56178 ಕ್ಕೆ ಸಂಪರ್ಕಿಸಲು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News