ಗದಗ : ಕೊರೋನ ಸೋಂಕಿಗೆ ವೃದ್ಧೆ ಬಲಿ
Update: 2020-04-09 11:19 IST
ಗದಗ : ರಾಜ್ಯದಲ್ಲಿ ಕೊರೋನ ವೈರಸ್ ಸೋಂಕಿಗೆ ಬಲಿಯಾಗುವವರ ಸಂಖ್ಯೆ ಏರಿಕೆಯಾಗುತ್ತಿದ್ದು, ಇಂದು ಗದಗದಲ್ಲಿ 80 ವರ್ಷದ ವೃದ್ಧೆಯೊಬ್ಬರು ಕೊರೋನ ವೈರಸ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಆ ಮೂಲಕ ರಾಜ್ಯದಲ್ಲಿ ಕೊರೋನ ವೈರಸ್ ಸೋಂಕಿಗೆ ಬಲಿಯಾದವರ ಸಂಖ್ಯೆ 6ಕ್ಕೆ ಏರಿಕೆಯಾಗಿದ್ದು ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿದೆ.
ಮೃತರು ಗದಗ ಜಿಲ್ಲೆಯ ರಂಗನವಾಡಿ ಗಲ್ಲಿಯ ನಿವಾಸಿ ಎಂದು ಹೇಳಲಾಗಿದೆ. ನಿನ್ನೆ ರಾತ್ರಿ 12.55ರ ಸುಮಾರಿಗೆ ಅವರಿಗೆ ಹೃದಯಾಘಾತವಾಗಿತ್ತು ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ್ ದೃಢಪಡಿಸಿದ್ದಾರೆ.