ಎಪಿಎಂಸಿ ಸಮಸ್ಯೆ ಬಗೆಹರಿಸಲು ಶಾಸಕ ಖಾದರ್ ಒತ್ತಾಯ

Update: 2020-04-09 12:09 GMT

ಮಂಗಳೂರು, ಎ.8: ಬೈಕಂಪಾಡಿಯಲ್ಲಿ ಎಪಿಎಂಸಿ (ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ)ಯಲ್ಲಿ ಹಣ್ಣು ಹಾಗೂ ತರಕಾರಿ ಸಗಟು ವ್ಯಾಪಾರ ಬುಧವಾರದಿಂದ ಆರಂಭಗೊಂಡಿದ್ದು, ಶಾಸಕರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹಾಗೂ ಮಾಜಿ ಶಾಸಕ ಮೊಯ್ದಿನ್ ಬಾವ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭ ವರ್ತಕರು ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆ ಶಾಸಕರ ಗಮನ ಸೆಳೆದಿದ್ದು, ಅವರು ಈ ಸಂದರ್ಭ ಅಲ್ಲಿದ್ದ ಎಪಿಎಂಸಿ ಅಧಿಕಾರಿಗಳ ಜತೆಗೆ ಸಮಾಲೋಚನೆ ನಡೆಸಿದರು.

ಮನಪಾ ಹಾಗೂ ಜಿಲ್ಲಾಡಳಿತ ಯಾವುದೇ ಮುನ್ಸೂಚನೆ ನೀಡದೆ ಈ ರೀತಿ ಎಪಿಎಂಸಿಗೆ ಸಗಟು ವ್ಯಾಪಾರವನ್ನು ಸ್ಥಳಾಂತರ ಗೊಳಿಸಿರುವ ಕಾರಣ ವ್ಯಾಪಾರಸ್ಥರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದು, ಇದು ಅವೈಜ್ಞಾನಿಕ ನಿರ್ಧಾರ ಎಂದು ಅಭಿಪ್ರಾಯಿಸಿರುವ ಶಾಸಕ ಯು.ಟಿ.ಖಾದರ್, ಮೂಲಭೂತ ಸೌಕರ್ಯಗಳನ್ನು ಒದಗಿಸದಿರುವುದು ಕಂಡು ಬಂದಿದೆ ಎಂದು ಹೇಳಿದ್ದಾರೆ.

ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಜಿಲ್ಲಾಡಳಿತ ಈ ಪರಿಶೀಲನೆ ನಡೆಸಿ, ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News