×
Ad

ಪರಿಹಾರ ಸಾಮಗ್ರಿಗಳ ಮೇಲೆ ಬಿಜೆಪಿ ನಾಯಕರ ಫೋಟೋ: 'ತಲೆ ತಗ್ಗಿಸುವ ಸಂಗತಿ' ಎಂದ ಕುಮಾರಸ್ವಾಮಿ

Update: 2020-04-09 21:19 IST

ಬೆಂಗಳೂರು, ಎ. 9: 'ಕೊರೋನ ವೈರಸ್ ಸೋಂಕಿನ ಸಂಕಷ್ಟದಿಂದ ಹೇಗೆ ಪಾರಾಗುವುದೆಂದು ಇಡೀ ಜಗತ್ತು ಚಿಂತಿಸುತ್ತಿದ್ದರೆ, ಬಿಜೆಪಿಯ ಕೆಲ ನಾಯಕರು ಸರಕಾರದ ಪರಿಹಾರ ಸಾಮಗ್ರಿ ಮೇಲೆ ತಮ್ಮ ಫೋಟೋ ಹಾಕಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಸಂಗತಿ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, 'ಇದೇನು ಜನಸಾಮಾನ್ಯರಿಗೆ ಸರಕಾರ ನೀಡುವ ಪರಿಹಾರ ಸಾಮಗ್ರಿಯೋ? ಬಿಜೆಪಿ ಪಕ್ಷದ ಕೊಡುಗೆಯೋ? ಅಥವಾ ಅರವಿಂದ ಲಿಂಬಾವಳಿಯವರ ವೈಯಕ್ತಿಕ ದಾನವೋ? ಅಥವಾ ಲಜ್ಜೆಗೇಡಿ ರಾಜಕಾರಣವೋ? ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಉತ್ತರ ಹೇಳುವರೇ?' ಎಂದು ಪ್ರಶ್ನಿಸಿದ್ದಾರೆ.

'ಒಂದು ಸಮುದಾಯವನ್ನು ಕೊರೋನ ವೈರಸ್ ಸೋಂಕಿನ ಮಹಾಮಾರಿಗೆ ಸಮೀಕರಿಸುವವರ ಬಗ್ಗೆ ದಿವ್ಯ ಮೌನ ತಳೆದ ಪ್ರಧಾನಿ ಮೋದಿ ಬಡ ಕಾರ್ಮಿಕರ ಪರಿಹಾರ ಸಾಮಗ್ರಿಗೆ ಕೆಲ ಪ್ರಚಾರಪ್ರಿಯರು ತಮ್ಮ ಫೋಟೋ ಸ್ಟಿಕರ್ ಅಂಟಿಸಿ ನೀಡುವುದಕ್ಕೆ ಸಮ್ಮತಿ ಸೂಚಿಸಿದ್ದಾರೆಯೇ?' ಎಂದು ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News