ತರಕಾರಿ ಸಾಗಣೆಗೆ ಯಾವುದೇ ನಿರ್ಬಂಧ ಇಲ್ಲ: ಸಚಿವ ಬಿ.ಸಿ.ಪಾಟೀಲ್

Update: 2020-04-09 15:52 GMT

ಗದಗ, ಎ.9: ಜಿಲ್ಲೆಯಿಂದ ಹೊರಜಿಲ್ಲೆಗಳಿಗೆ, ಮಾರುಕಟ್ಟೆಗಳಿಗೆ ತರಕಾರಿಗಳನ್ನು ಸಾಗಣೆ ಮಾಡಲು ಯಾವುದೇ ನಿರ್ಬಂಧವೂ ಇರುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದರು.

ಗದಗ ಜಿಲ್ಲಾ ಕೇಂದ್ರ ಸಭಾಂಗಣದಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರರೊಂದಿಗೆ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಸುಗಮವಾಗಿ ನಡೆಯಲು ಬೇಕಾದ ಬಿತ್ತನೆ ಬೀಜ, ಗೊಬ್ಬರಗಳ ಪೂರೈಕೆಗೆ ಯಾವುದೇ ಕೊರತೆ ಇಲ್ಲ. ಇದಕ್ಕೆ ಬೇಕಾದ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ. ರೈತರು ಆತಂಕಪಡುವ ಅಗತ್ಯವಿಲ್ಲ ಎಂದರು.

ಗದಗ ಜಿಲ್ಲಾ ಕೇಂದ್ರದ ನಾಗರಿಕರಿಗೆ ತರಕಾರಿ ಪೂರೈಸಲು ಎರಡು ಹಾಪ್ ಕಾಮ್ಸ್ ಮಳಿಗೆಗಳಿವೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಇನ್ನೂ ಹೆಚ್ಚುವರಿ ಮಳಿಗೆಗಳನ್ನು ತೆರೆಯಲು ಅವರು ಸೂಚನೆ ನೀಡಿದರು.

ಪೆಟ್ರೋಲ್ ಬಂಕ್ ಮುಚ್ಚಲು ನಿರ್ದೇಶಿಸಿಲ್ಲ. ಆದರೆ ಸ್ಥಳೀಯವಾಗಿ ಬೇರೆ ಕಾರಣದಿಂದ ಇಂದು ಮುಚ್ಚಿರಬಹುದು. ಅವುಗಳು ಮತ್ತೆ ಎಂದಿನಂತೆ ಕಾರ್ಯನಿರ್ವಹಿಸಲಿವೆ. ಜಿಲ್ಲೆಗೆ ಸೇರಿದ ಕೊರೋನ ಸೋಂಕಿತ ಮಹಿಳೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು ಅಲ್ಲಿನ ಸುತ್ತಮುತ್ತ ಅವಶ್ಯಕ ನಿರ್ಬಂಧ ಹೇರುವುದು ಅನಿವಾರ್ಯ ಅಗತ್ಯ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News