ಪಡಿತರ ಚೀಟಿ ಇಲ್ಲದವರಿಗೂ ಪಡಿತರ ವಿತರಣೆಗೆ ಕ್ರಮ: ಡಾ.ಅಶ್ವಥ್ ನಾರಾಯಣ

Update: 2020-04-09 17:00 GMT

ಬೆಂಗಳೂರು, ಎ.9: ರಾಜ್ಯದಲ್ಲಿ ಶೇ.25ಕ್ಕೂ ಹೆಚ್ಚಿನ ನಾಗರಿಕರ ಬಳಿ ಇದುವರೆಗೂ ಪಡಿತರ ಚೀಟಿಗಳಿಲ್ಲ. ಅಂತಹ ಬಡವರಿಗೂ ಪಡಿತರ ಕೊಡುವ ಉದ್ದೇಶವಿದ್ದು, ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಬಳಿ ಚರ್ಚಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎಸ್.ಅಶ್ವಥ್ ನಾರಾಯಣ ಹೇಳಿದ್ದಾರೆ.

ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಕೊರೋನದಿದ ಕಂಗಾಲಾಗಿರುವ ಆರ್ಥಿಕವಾಗಿ ಹಿಂದುಳಿದಿದ್ದ ಬಡವರಿಗೆ ಆಹಾರ ಕಿಟ್‍ಗಳನ್ನು ವಿತರಿಸಿ ಮಾತನಾಡಿದ ಅವರು, ಆಹಾರ ಪದಾರ್ಥಗಳ ಕೊರತೆಯಾಗದಂತೆ ಸರಕಾರ ಎಲ್ಲ ಕ್ರಮ ಕೈಗೊಂಡಿದೆ. ಪಡಿತರ ವಿತರಣೆಯಲ್ಲಿ ಲೋಪವಾಗದಂತೆ ನಿಗಾ ವಹಿಸಲಾಗಿದೆ ಎಂದು ತಿಳಿಸಿದರು.

ಯಾರಿಗೂ ಹಸಿವಿನಿಂದ ಸಾಯುವಂತಹ ಸ್ಥಿತಿ ಬರಬಾರದು. ಈ ನಿಟ್ಟಿನಲ್ಲಿ ಆಹಾರ ವಿತರಣೆ ಮಾಡುತ್ತಿರುವವರಿಗೆ ಅಭಿನಂದನೆಗಳು ಸಲ್ಲಿಸಲು ಇಷ್ಟಪಡುತ್ತೇನೆ. ಉಳ್ಳವರು ಇಲ್ಲದವರಿಗೆ ಅನ್ನದಾನ ಮಾಡಲು ಇದು ಸರಿಯಾದ ಸಮಯ ಎಂದು ಅವರು ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News