ಕೊರೋನ ವಾರಿಯರ್ ಆಗಿ ಕಾರ್ಯ ನಿರ್ವಹಿಸಲು ನೋಂದಣಿಗೆ ಅವಕಾಶ

Update: 2020-04-09 17:15 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಎ.9: ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಅರೆ ವೈದ್ಯಕೀಯ ವಿದ್ಯಾರ್ಥಿಗಳು ಕೋವಿಡ್-19 ವಾರಿಯರ್ ಆಗಿ ಕಾರ್ಯನಿರ್ವಹಿಸಲು ಸ್ವಯಂ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.

ರಾಜ್ಯದಲ್ಲಿ ಕೊರೋನ ಸೋಂಕಿನ ನಿವಾರಣೆಯ ಕಾರ್ಯದಲ್ಲಿ ಆರೋಗ್ಯ ಯೋಧರಾಗಿ ಕಾರ್ಯನಿರ್ವಹಿಸಲು ಕರ್ನಾಟಕ ನರ್ಸಿಂಗ್ ಹಾಗೂ ಅರೆ ವೈದ್ಯಕೀಯ ವಿಜ್ಞಾನಗಳ ಶಿಕ್ಷಣ ನಿಯಂತ್ರಣ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ ವಿವಿಧ ಕೋರ್ಸ್‍ಗಳ ಸುಮಾರು 5ಸಾವಿರಕ್ಕೂ ಅಧಿಕ ಅರೆ ವೈದ್ಯಕೀಯ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ನೋಂದಣಿ ಮಾಡಿಕೊಂಡಿರುತ್ತಾರೆ.

ಕೊರೋನ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಎಲ್ಲ ಅರೆ ವೈದ್ಯಕೀಯ ವಿದ್ಯಾರ್ಥಿಗಳು ಯೋಧರಂತೆ ಕಾರ್ಯ ನಿರ್ವಹಿಸಬೇಕಾಗುತ್ತದೆ. ಈ ಕಾರ್ಯಕ್ಕಾಗಿ ರಾಜ್ಯ ಸರಕಾರ ಯಾವುದೇ ಸಮಯದಲ್ಲಿ ಕರೆ ಮಾಡಬಹುದು. ಹೀಗಾಗಿ ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಸ್ವ ವಿವರವನ್ನು ಸ್ವಯಂ ಪ್ರೇರಿತವಾಗಿ ನೋಂದಾಯಿಸಿಕೊಳ್ಳಲು ಆನ್‍ಲೈನ್‍ನಲ್ಲಿ Pmb.campusuite.in/covid19/Enroll.aspx ಅವಕಾಶ ಕಲ್ಪಿಸಿತ್ತು. ಇಲ್ಲಿಯವರೆಗೆ ಇದರಲ್ಲಿ 5 ಸಾವಿರ ಮಂದಿ ನೋಂದಾಯಿಸಿಕೊಂಡಿದ್ದಾರೆ.

ಇನ್ನು ನೋಂದಾಯಿಸಿಕೊಳ್ಳದೇ ಇರುವ ಅರೆ ವೈದ್ಯಕೀಯ ವಿದ್ಯಾರ್ಥಿಗಳು ಶೀಘ್ರದಲ್ಲಿ ನೋಂದಾಯಿಸಿಕೊಳ್ಳುವಂತೆ ಪ್ರಕಟನೆಯ ಮೂಲಕ ಮನವಿ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News