ಕೊಡಗಿನಲ್ಲಿ 565 ಮಂದಿ ಗೃಹ ಸಂಪರ್ಕ ತಡೆಯಲ್ಲಿದ್ದಾರೆ: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್

Update: 2020-04-09 17:24 GMT

ಮಡಿಕೇರಿ, ಎ.9: ಕೊಡಗು ಜಿಲ್ಲೆಯಲ್ಲಿ ಕೊರೋನ ಸೋಂಕು ಹಿನ್ನೆಲೆ ಗೃಹ ಸಂಪರ್ಕ ತಡೆಯಲ್ಲಿ ಒಟ್ಟು 565 ಮಂದಿ ಇದ್ದಾರೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ವಿದೇಶದಿಂದ ಬಂದವರ ಪೈಕಿ ಗೃಹ ಸಂಪರ್ಕ ತಡೆಯಲ್ಲಿದ್ದ ಎಲ್ಲರೂ 14 ದಿನಗಳ ಸಂಪರ್ಕ ತಡೆ ಅವಧಿಯನ್ನು ಪೂರೈಸಿದ್ದಾರೆ. ಜಿಲ್ಲೆಯಲ್ಲಿ ಗೃಹ ಸಂಪರ್ಕ ತಡೆಯಲ್ಲಿರುವ ರಾಜ್ಯದ ಇತರೆ ಜಿಲ್ಲೆಗಳ 536 ಮತ್ತು ಇತರೆ ರಾಜ್ಯಗಳ 15 ಮಂದಿ ಇದ್ದಾರೆ. ಇಲ್ಲಿಯವರೆಗೆ ಒಟ್ಟು 80 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. ಒಟ್ಟು 78 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿದ್ದು, 2 ಪ್ರಕರಣಗಳಲ್ಲಿ ವರದಿಯನ್ನು ನಿರೀಕ್ಷಿಸಲಾಗಿದೆ. ಪ್ರಸ್ತುತ ಕೋವಿಡ್ ಆಸ್ಪತ್ರೆಯ ಐಸೋಲೇಶನ್ ವಾರ್ಡ್ ನಲ್ಲಿ ಯಾವುದೇ ಪ್ರಕರಣಗಳು ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News