ಲಾಕ್‍ಡೌನ್: ರಾಜ್ಯದ ಹಾಸ್ಟೆಲ್, ಪಿಜಿಗಳಲ್ಲಿರುವ ವಿದ್ಯಾರ್ಥಿಗಳ ನೆರವಿಗೆ ವೆಬ್‍ಸೈಟ್‍

Update: 2020-04-09 18:01 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಎ.9: ಲಾಕ್‍ಡೌನ್ ಹಿನ್ನೆಲೆಯಲ್ಲಿ ಹಾಸ್ಟೆಲ್ ಮತ್ತು ಪಿಜಿಗಳಲ್ಲಿ ವಾಸವಿರುವ ವಿವಿಧ ದೇಶ ಮತ್ತು ರಾಜ್ಯಗಳಿಂದ ಬಂದು ಇಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ರಾಜ್ಯದ ಶಿಕ್ಷಣ ಇಲಾಖೆ ವೆಬ್‍ಸೈಟ್‍ನ್ನು ಆರಂಭಿಸಿದೆ.

ಲಾಕ್‍ಡೌನ್ ಇರುವುದರಿಂದ ಹಾಸ್ಟೆಲ್, ಪಿಜಿಗಳಲ್ಲಿ ಇರುವ ವಿದ್ಯಾರ್ಥಿಗಳಿಗೆ ವಸತಿ, ಆಹಾರ ಸಾಮಗ್ರಿಗಳ ಪೂರೈಕೆ ಹಾಗೂ ವೈದ್ಯಕೀಯ ಸಹಾಯಕ್ಕೆ ಸಂಬಂಧಿಸಿದಂತೆ ಉಂಟಾಗುವ ಸಮಸ್ಯೆಗಳನ್ನು ನಿವಾರಿಸಿ ನೆರವು ನೀಡಲು ರಾಜ್ಯ ಮಟ್ಟದಲ್ಲಿ ಸಮಿತಿ ಮತ್ತು ಜಿಲ್ಲಾ ಮಟ್ಟದಲ್ಲಿ ನೋಡಲ್ ಆಫೀಸರ್ ಗಳನ್ನು ನೇಮಿಸಲಾಗಿದ್ದು ಅವರ ವಿವರವನ್ನು ಇಲಾಖೆಯ ಜಾಲತಾಣ www.migrantstudent.in ದಲ್ಲಿ ನೀಡಲಾಗಿದೆ. ವಿದ್ಯಾರ್ಥಿಗಳ ನೆರವಿಗೆ  8277573373, 8095556178 ಸಹಾಯವಾಣಿ ಆರಂಭಿಸಲಾಗಿದೆ. ವಿದ್ಯಾರ್ಥಿಗಳು ಇದರ ನೆರವು ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News