ಅನಂತ ಕುಮಾರ, ಶೋಭಾ, ಯತ್ನಾಳ್, ರೇಣುಕಾಚಾರ್ಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕೆಪಿಸಿಸಿಯಿಂದ ಐಜಿಪಿಗೆ ಮನವಿ

Update: 2020-04-10 13:19 GMT

 
ಬೆಂಗಳೂರು, ಎ.10: ಕೊರೋನ ಸೋಂಕು ಹರಡುವಿಕೆ ಸಂಬಂಧ ವದಂತಿಗಳನ್ನು ಹಬ್ಬಿಸುವುದರ ಜತೆಗೆ ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಕೋಮು ಸಾಮರಸ್ಯ ಹಾಳುಗೆಡವಲು ಯತ್ನಿಸುತ್ತಿರುವ  ಅನಂತಕುಮಾರ ಹೆಗಡೆ, ಮಾಜಿ ಸಚಿವರಾದ ಬಸನಗೌಡ ಪಾಟೀಲ್ ಯತ್ನಾಳ್, ಎಂ.ಪಿ.ರೇಣುಕಾಚಾರ್ಯ, ಶೋಭಾ ಕರಂದ್ಲಾಜೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕೆಪಿಸಿಸಿ ನಿಯೋಗವು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್‌ರಿಗೆ ಮನವಿ ಸಲ್ಲಿಸಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಎಂ.ಸಿ.ವೇಣುಗೋಪಾಲ್ ಅವರನ್ನೊಳಗೊಂಡ ಕಾಂಗ್ರೆಸ್ ನಿಯೋಗವು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಬೆಂಗಳೂರಿನ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿತು.

ಐಪಿಸಿ ಕಲಂ 153 ಎ ಪ್ರಕಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಹಾಗೂ ಅವರನ್ನು ತಕ್ಷಣ ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರವಾಗಿ ಮನವಿ ಸಲ್ಲಿಸಿ ಒತ್ತಾಯಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News