ವಿವಾದಿತ ಹೇಳಿಕೆ: ಬಿಜೆಪಿ ಶಾಸಕ ರೇಣುಕಾಚಾರ್ಯ ವಿರುದ್ಧ ದೂರು ದಾಖಲು

Update: 2020-04-10 15:16 GMT

ದಾವಣಗೆರೆ, ಎ.10: ಕೋವಿಡ್-19 ಸೋಂಕು ಹರಡಿಸುವ ತಬ್ಲೀಗಿಗಳನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ವಿವಾದಿತ ಹೇಳಿಕೆ ನೀಡಿದ ಆರೋಪದ ಮೇಲೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರ ವಿರುದ್ಧ ದೂರು ದಾಖಲಾಗಿದೆ.

ರೇಣುಕಾಚಾರ್ಯ ಉದ್ದೇಶಪೂರ್ವಕವಾಗಿ ಕೋಮು ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ಸುಭಾಷ್ ಚಂದ್ರ ಎಂಬವರು ಇಲ್ಲಿನ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿ, ಐಪಿಸಿ ಸೆಕ್ಷನ್ 505(ಬಿ) ಉಲ್ಲಂಘನೆ ಮಾಡಿರುವ ಹಿನ್ನೆಲೆ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಅದರಂತೆ ರೇಣುಕಾಚಾರ್ಯ ವಿರುದ್ಧ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News