ಆಶಾ ಕಾರ್ಯಕರ್ತೆಯರ ಕರ್ತವ್ಯಕ್ಕೆ ಅಡ್ಡಿ ಆರೋಪ: ಓರ್ವ ಪೊಲೀಸ್ ವಶಕ್ಕೆ

Update: 2020-04-10 17:15 GMT

ಹುಬ್ಬಳ್ಳಿ, ಎ.10: ಕೊರೋನ ವೈರಸ್ ಮುಂಜಾಗ್ರತಾ ಕ್ರಮವಾಗಿ ಸರ್ವೇ ಕಾರ್ಯ ಮಾಡುತ್ತಿದ್ದ ಆಶಾ ಕಾರ್ಯಕರ್ತೆಯರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಘಟನೆ ಹುಬ್ಬಳ್ಳಿಯ ಗೌಳಿ ಗಲ್ಲಿಯಲ್ಲಿ ನಡೆದಿದೆ.

ಆಶಾ ಕಾರ್ಯಕರ್ತೆಯರ ಕೈಯಲ್ಲಿರುವ ಕಡತಗಳನ್ನು ಕಸಿದುಕೊಂಡು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ತಿಳಿದುಬಂದಿದೆ. ನಾಗವೇಣಿ ಪಾನಗಲ್, ಲತಾ ಶ್ರೀರಾಮ ಎಂಬವರು ಜಿಲ್ಲಾಡಳಿತದ ಆದೇಶದ ಮೇರೆಗೆ ಹಾಗೂ ಆರೋಗ್ಯ ಇಲಾಖೆಯ ನಿರ್ದೇಶನದ ಮೇರೆಗೆ ಸರ್ವೇ ಮಾಡಲು ಹೋಗಿದ್ದರು. ಈ ವೇಳೆ ಗೌಳಿ ಗಲ್ಲಿಯ ಕೆಲವರು ಇವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೇ, ದಾಖಲೆಗಳನ್ನು ಕಸಿದುಕೊಂಡು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸ್ಥಳಕ್ಕೆ ಶಹರ ಪೋಲಿಸ್ ಠಾಣೆಯ ಸಿಬ್ಬಂದಿ ಆಗಮಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News