ಆಶಾ ಕಾರ್ಯಕರ್ತೆಯ ಕರ್ತವ್ಯಕ್ಕೆ ಅಡ್ಡಿ ಆರೋಪ: ಇಬ್ಬರು ಸೆರೆ
Update: 2020-04-11 20:19 IST
ಮಂಗಳೂರು, ಎ.11: ನಗರ ಹೊರವಲಯದ ಮಲ್ಲೂರು ಬಳಿ ಆಶಾ ಕಾರ್ಯಕರ್ತೆಯ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇರೆಗೆ ಇಬ್ಬರನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಬಂಧಿತರನ್ನು ಮಲ್ಲೂರು ಬದ್ರಿಯಾ ನಗರದ ನಿವಾಸಿಗಳಾದ ಇಸ್ಮಾಯೀಲ್ (45) ಮತ್ತು ಅಶ್ರಫ್ (32) ಎಂದು ಗುರುತಿಸಲಾಗಿದೆ.
ಮಲ್ಲೂರಿನ ಆಶಾ ಕಾರ್ಯಕರ್ತೆ ವಸಂತಿ ಎಂಬವರು ಕರ್ತವ್ಯ ನಿರತರಾಗಿದ್ದ ವೇಳೆ ಆರೋಪಿಗಳಿಬ್ಬರು ಆಕೆಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ವಸಂತಿ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.