ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ನೇಮಕಾತಿ: ಅಭ್ಯಥಿಗಳಿಗೆ ಎ.15ರಂದು ನೇರ ಸಂದರ್ಶನ

Update: 2020-04-11 15:05 GMT

ಉಡುಪಿ, ಎ.11: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಉಡುಪಿ ಜಿಲ್ಲಾ ಸರ್ವೇಕ್ಷಣಾ ಘಟಕದಲ್ಲಿ ಖಾಲಿಯಾಗಿರುವ ಡೇಟಾ ಮೆನೇಜರ್ ಹುದ್ದೆಗೆ, ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಎ.15ರಂದು ಬೆಳಗ್ಗೆ 10:30ಕ್ಕೆ ಅಜ್ಜರಕಾಡಿನ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಆಸಕ್ತ ಅಭ್ಯರ್ಥಿ ಕಂಪ್ಯೂಟರ್ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಹೊಂದಿದ್ದು, ಜೊತೆಗೆ ಒಂದು ವರ್ಷದ ಅನುಭವ ಅಥವಾ ಬಿ.ಇ. ಇನ್ ಐಟಿ/ಎಲೆಕ್ಟ್ರಾನಿಕ್ಸ್ ವಿದ್ಯಾರ್ಹತೆ ಹೊಂದಿರುವ 40 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.

ಸಮಾಜ ಸೇವೆಯಲ್ಲಿ ಅನುಭವವಿದ್ದವರಿಗೆ ಆದ್ಯತೆ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಯ ಸಂಚಿತ ವೇತನ 22,050ರೂ. ಆಗಿರುತ್ತದೆ ಎಂದು ಸದಸ್ಯ ಕಾರ್ಯದರ್ಶಿ, ಜಿಲ್ಲಾ ಆಯ್ಕೆ ಸಮಿತಿ, ಐಡಿಎಸ್‌ಪಿ ಘಟಕ ಉಡುಪಿ ಇವರ ಪ್ರಕಟಣೆ ತಿಳಿಸಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News