×
Ad

ಬೈಕಂಪಾಡಿ: ಕಾರ್ಖಾನೆಯಲ್ಲಿ ಅಗ್ನಿ ಅನಾಹುತ

Update: 2020-04-11 20:58 IST

ಮಂಗಳೂರು, ಎ.11: ನಗರ ಹೊರವಲಯದ ಬೈಕಂಪಾಡಿಯ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ರಾತ್ರಿ ಅಗ್ನಿ ಅನಾಹುತ ಸಂಭವಿಸಿದೆ.

ಕೈಗಾರಿಕಾ ಪ್ರದೇಶದ ಅಂಗರಗುಂಡಿ ಸಮೀಪದ ಮೆಟಲ್ ರಿಫೈನರಿಸ್ ಕಾರ್ಖಾನೆಯು ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿಯಿತು ಎನ್ನಲಾಗಿದೆ. ಕಾರ್ಖಾನೆಯ ಕಚ್ಚಾ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಭಾರೀ ನಷ್ಟ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

ಹರಿಸೂಧನ್ ಎಂಬವರಿಗೆ ಸೇರಿದ ಈ ಮೆಟಲ್ ರಿಪೈನರಿ ಕಾರ್ಖಾನೆಯು ಲಾಕ್‌ಡೌನ್ ಹಿನ್ನೆಲೆಯಲ್ಲಿ ಕಾರ್ಮಿಕರಿಂದ ಮುಕ್ತವಾಗಿತ್ತು. ಹಾಗಾಗಿ ಮತ್ತಷ್ಟು ಅನಾಹುತ ತಪ್ಪಿತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿ ವರ್ಗವು ದೌಡಾಯಿಸಿ ಬೆಂಕಿ ನಂದಿಸಿದ್ದು, ಪಣಂಬೂರು ಪೊಲೀಸರು ಕೂಡ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News