ಒಂದು ಸಮುದಾಯವನ್ನು ಗುರಿಯಾಗಿಸಿ ಕೋಮು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ: ಭಾಸ್ಕರ್ ರಾವ್ ಎಚ್ಚರಿಕೆ

Update: 2020-04-11 16:02 GMT

ಬೆಂಗಳೂರು, ಎ.11: ಕೊರೋನ ವೈರಸ್ ಬಗ್ಗೆ ಹಾಗೂ ಕೋಮು ದ್ವೇಷ ಹರಡುವ ವದಂತಿಗಳನ್ನು ಸೃಷ್ಟಿಸುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರ ವೈಜ್ಞಾನಿಕವಾಗಿ ಇಂತಹ ವದಂತಿಗಳ ಮೇಲೆ ತೀವ್ರ ನಿಗಾ ಇಡುತ್ತಿದೆ ಎಂದು ತಿಳಿಸಿದರು.

ಯಾವುದೇ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಕೋಮು ದ್ವೇಷ ಹರಡುವವರ ವಿರುದ್ಧ ಕ್ರಮ ಜರುಗಿಸಲಾಗುವುದು. ಯಾವುದೇ ಕಾರಣಕ್ಕೂ ಸುಳ್ಳು ಸುದ್ದಿ ಹರಡಬೇಡಿ. ಇದು ನನ್ನ ಕಳಕಳಿಯ ಮನವಿ ಎಂದು ನುಡಿದರು.

ಇತ್ತೀಚೆಗೆ ಕೆಲವರು ಐಷಾರಾಮಿ ಕಾರುಗಳಲ್ಲಿ ಓಡಾಡುತ್ತಿದ್ದುದನ್ನು ಪೊಲೀಸರು ಗಮನಿಸಿದ್ದಾರೆ. ಲಾಕ್‍ಡೌನ್ ಉಲ್ಲಂಘಿಸುವವರು ಯಾರೇ ಆದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ ಅವರು, ಲಾಕ್‍ಡೌನ್ ನಿಯಮಗಳನ್ನು ಪ್ರತಿಯೊಬ್ಬರು ಪಾಲಿಸಬೇಕಾಗಿದೆ ಎಂದು ಹೇಳಿದರು.

ಮಾಲಕರಿಗೆ ಎಚ್ಚರಿಕೆ

ಅತಿಥಿ ಗೃಹಗಳಲ್ಲಿ ವಾಸಿಸುವ ನಿವಾಸಿಗಳಿಂದ ಬಾಡಿಗೆಗೆ ಮಾಲಕರು ಒತ್ತಡ ಹೇರಬಾರದು. ಅಷ್ಟೇ ಅಲ್ಲದೆ, ಆಹಾರ ವಿತರಣೆ ಸಂಬಂಧ ದೂರುಗಳು ಕೇಳಿಬಂದರೆ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಭಾಸ್ಕರ್ ರಾವ್ ಎಚ್ಚರಿಕೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News