×
Ad

ಕೊರೋನ ವೈರಸ್: ದ.ಕ.ಜಿಲ್ಲೆಯಲ್ಲಿ ಶನಿವಾರ 46 ಮಂದಿಯ ವರದಿ ನೆಗೆಟಿವ್

Update: 2020-04-11 21:40 IST

ಮಂಗಳೂರು, ಎ.11: ಕೊರೋನ ವೈರಸ್ ರೋಗ ತಡೆಯುವ ನಿಟ್ಟಿನಲ್ಲಿ ದ.ಕ.ಜಿಲ್ಲಾಡಳಿತವು ವಿವಿಧ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ಮುಂದುವರಿಸಿದೆ. ಈ ಮಧ್ಯೆ ಶನಿವಾರ ಪ್ರಯೋಗಾಲಯದಿಂದ ಸ್ವೀಕರಿಸಲಾದ 46 ಮಂದಿಯ ವರದಿಯು ನೆಗೆಟಿವ್ ಆಗಿದೆ. ಇನ್ನೂ 34 ಮಂದಿಯ ವರದಿಯಾಗಿ ಕಾಯಲಾಗುತ್ತಿದೆ. ಜ್ವರದ ಹಿನ್ನೆಲೆಯಲ್ಲಿ 8 ಮಂದಿಯ ಮೇಲೆ ನಿಗಾ ಇಡಲಾಗಿದೆ.

ಶನಿವಾರ 52 ಮಂದಿಯ ಸ್ಕ್ರೀನಿಂಗ್ ಮಾಡಲಾಗಿದೆ. ಇದರೊಂದಿಗೆ ಈವರೆಗೆ 38,865 ಮಂದಿಯ ಸ್ಕ್ರೀನಿಂಗ್ ಮಾಡಲಾಗಿದೆ. ಅಲ್ಲದೆ 34 ಮಂದಿಯ ಗಂಟಲಿನ ದ್ರವವನ್ನು ಪರೀಕ್ಷೆಗಾಗಿ ವೆನ್ಲಾಕ್ ಆಸ್ಪತ್ರೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಶನಿವಾರದವರೆಗೆ 2598 ಮಂದಿ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಇದೀಗ ಯಾರೂ ಕ್ವಾರಂಟೈನ್‌ನಲ್ಲಿಲ್ಲ. ಆದರೆ ಇಎಸ್‌ಐ ಆಸ್ಪತ್ರೆಯಲ್ಲಿ 8 ಮಂದಿಯ ಸೇರ್ಪಡೆಯೊಂದಿಗೆ ಶನಿವಾರದವರೆಗೆ 23 ಮಂದಿ ಕ್ವಾರಂಟೈನ್‌ನಲ್ಲಿದ್ದಾರೆ. ಶನಿವಾರ 28 ದಿನದ ಕ್ವಾರಂಟೈನ್ (ನಿಗಾ) ಅವಧಿಯನ್ನು 3,347 ಮಂದಿ ಪೂರೈಸಿದ್ದಾರೆ.

ಈವರೆಗೆ 436 ಮಂದಿಯ ಗಂಟಲಿನ ದ್ರವವನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಆ ಪೈಕಿ 420 ಮಂದಿಯ ವರದಿಯನ್ನು ಸ್ವೀಕರಿಸಲಾಗಿದ್ದು, ಅದರಲ್ಲಿ 390 ಮಂದಿಯ ವರದಿಯು ನೆಗೆಟಿವ್ ಆಗಿದ್ದರೆ, 12 ಮಂದಿಯ ವರದಿಯು ಪಾಸಿಟಿವ್ ಆಗಿತ್ತು. ಪಾಸಿಟಿವ್‌ಗಳ ಪೈಕಿ ಮಗು ಸಹಿತ 6 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಉಳಿದ 6 ಮಂದಿ ಚೇತರಿಸುತ್ತಿದ್ದಾರೆ. ದ.ಕ.ಜಿಲ್ಲೆಯ 13 ಕಡೆ ಆರಂಭಿಸಲಾದ ಜ್ವರದ ಪ್ರಯೋಗಾಲಯದಲ್ಲಿ ಶನಿವಾರ 109 ಮಂದಿಯ ತಪಾಸಣೆ ಮಾಡಲಾಗಿದೆ.

ಈವರೆಗಿನ 12 ಕೊರೋನ ಪಾಸಿಟಿವ್ ಪ್ರಕರಣಗಳಲ್ಲಿ 128 ಪ್ರಾಥಮಿಕ ಸಂಪರ್ಕಿತರು ಮತ್ತು 593 ದ್ವಿತೀಯ ಸಂಪರ್ಕಿತರನ್ನು ಆಶಾ ಕಾರ್ಯಕರ್ತೆಯರು ಭೇಟಿ ಮಾಡಿ ಅವರು ಪುನಃ ಸಂಪರ್ಕಕ್ಕೆ ಬಂದಿರುವ ವ್ಯಕ್ತಿಗಳನ್ನು ಗುರುತಿಸಲಾಗಿದೆ. ಈ ಕಾರ್ಯಚರಣೆಯಲ್ಲಿ 6447 ಮನೆಗಳಿಗೆ ಆಶಾ ಕಾರ್ಯಕರ್ತೆಯರು ಭೇಟಿ ಮಾಡಿ 30,663 ಮಂದಿಯನ್ನು ಸಂಪರ್ಕಿಸಿ ಅವರ ಆರೋಗ್ಯ ಸ್ಥಿತಿಗತಿಯ ಮಾಹಿತಿಯನ್ನು ಕಲೆ ಹಾಕಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News