×
Ad

ಲಾಕ್‌ಡೌನ್ ಉಲ್ಲಂಘನೆ: 167 ವಾಹನಗಳು ಮುಟ್ಟುಗೋಲು

Update: 2020-04-11 21:52 IST

ಮಂಗಳೂರು, ಎ.11:ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಲಾಕ್‌ಡೌನ್ ಉಲ್ಲಂಘನೆ ಮಾಡಿ ಸಂಚರಿಸುತ್ತಿದ್ದ 167 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಶನಿವಾರ ವಶಪಡಿಸಿಕೊಂಡು ಕೇಸು ದಾಖಲಿಸಿದ್ದಾರೆ.

ಲಾಕ್‌ಡೌನ್ ಹಿನ್ನೆಲೆಯಲ್ಲಿ ನಾಕಾಬಂದಿ ಹಾಕಿ ಬಿಗಿ ತಪಾಸಣೆ ನಡೆಸಲಾಗುತ್ತಿದ್ದು, ಲಾಕ್‌ಡೌನ್ ಉಲ್ಲಂಘನೆ ಮಾಡಿದ ದ್ವಿಚಕ್ರ ವಾಹನ, ಕಾರು, ಆಟೋರಿಕ್ಷಾ ಸೇರಿದಂತೆ 167 ವಾಹನಗಳನ್ನು ಮುಟ್ಟುಗೋಲು ಹಾಕಲಾಗಿದೆ.

ಅಗತ್ಯ ಸಾಮಗ್ರಿಗಳನ್ನು ಮನೆ ಬಾಗಿಲಿಗೆ ಕೊಂಡೊಯ್ಯವ ವ್ಯವಸ್ಥೆಯನ್ನು ನಗರ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಮಾಡಲು ಜಿಲ್ಲಾಡಳಿತ ಹಲವು ಕ್ರಮಗಳನ್ನು ಕೈಗೊಂಡಿದ್ದರೂ ಕೆಲವರು ಅನಗತ್ಯವಾಗಿ ಕಾರು, ರಿಕ್ಷಾ, ಬೈಕ್ ಇತ್ಯಾದಿ ವಾಹನದಲ್ಲಿ ತಿರುಗಾಡುವುದನ್ನು ಪತ್ತೆ ಹಚ್ಚಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರ್ ಡಾ. ಪಿ.ಎಸ್. ಹರ್ಷ ನಿರ್ದೇಶನದಂತೆ ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಲಕ್ಷ್ಮೀ ಗಣೇಶ್ ಮತ್ತು ಸಂಚಾರ ವಿಭಾಗದ ಎಸಿಪಿ ಮಂಜುನಾಥ್ ಶೆಟ್ಟಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News