×
Ad

ಹೆಚ್ಚಿನ ಬೆಲೆಗೆ ಹಾಲು ಮಾರಾಟ: ಬೇಕರಿ ಮಾಲಕನ ವಿರುದ್ಧ ಪ್ರಕರಣ ದಾಖಲು

Update: 2020-04-12 18:23 IST

ಬಳ್ಳಾರಿ, ಎ.12: ಎಂಆರ್ ಪಿ ದರಕ್ಕಿಂತ ಹೆಚ್ಚಿನ ಬೆಲೆಗೆ ನಂದಿನಿ ಹಾಲಿನ ಪ್ಯಾಕೆಟ್ ಮಾರಾಟ ಮಾಡುತ್ತಿದ್ದ ಹೊಸಪೇಟೆ ನಗರದ ಚಿತ್ತವಾಡ್ಗಿಯ ಬೇಕರಿ ಮಾಲಕ ವೆಂಕಟೇಶ್ ಗಾದಿಯಪ್ಪ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಸಾರ್ವಜನಿಕರೊಬ್ಬರು ಕೋವಿಡ್-19 ಸಹಾಯವಾಣಿ ಸಂಖ್ಯೆ 08392-277100ಗೆ ಕರೆ ಮಾಡಿ ದೂರು ಕೊಟ್ಟಿದ್ದರು. ದೂರಿನ ಹಿನ್ನೆಲೆಯಲ್ಲಿ ಆಹಾರ ಇಲಾಖೆಯ ಶಿರಸ್ತೇದಾರ ಎಚ್.ನಾಗರಾಜ, ಆಹಾರ ಇನ್‍ಸ್ಪೆಕ್ಟರ್ ಆರ್.ಅಜಿತ್‍ ಕುಮಾರ್, ಕಾನೂನು ಮಾಪನ ಅಧಿಕಾರಿ ಪ್ರೇಮಾ ಅವರು ಜಂಟಿಯಾಗಿ ದಾಳಿ ನಡೆಸಿದಾಗ ಅಕ್ರಮವಾಗಿ ನಂದಿನಿ ಉತ್ಪನ್ನಗಳು ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ.

ಲಾಭ ಗಳಿಸುವುದಕ್ಕಾಗಿ ಹೆಚ್ಚಿನ ಬೆಲೆಗೆ ಅಕ್ರಮವಾಗಿ ಮಾರಾಟ ಮಾಡುತ್ತಿರುವುದು ಖಚಿತವಾಗಿದ್ದರಿಂದ ಬೇಕರಿ ಮಾಲಕರ ವಿರುದ್ಧ ಕಾನೂನು ಮಾಪನ ಕಾಯ್ದೆ 2011 ಕಲಂ 18(2)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ನಾಗರಾಜ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News