×
Ad

ಹೊರ ಜಿಲ್ಲೆಗಳ ಪಾಸ್‌ಗಳಿಗೆ ಮಾನ್ಯತೆ ಇಲ್ಲ: ಉಡುಪಿ ಜಿಲ್ಲಾಧಿಕಾರಿ

Update: 2020-04-12 19:50 IST

ಉಡುಪಿ, ಎ.12: ಹೊರ ಜಿಲ್ಲೆಗಳಿಂದ ಪಾಸ್ ಪಡೆದು ಜಿಲ್ಲೆಯೊಳಗೆ ಪ್ರವೇಶಿಸುವವರಿಗೆ ಯಾವುದೇ ಕಾರಣಕ್ಕೂ ಚೆಕ್‌ಪೋಸ್ಟ್‌ಗಳಲ್ಲಿ ಅನುಮತಿ ನೀಡುವುದಿಲ್ಲ ಹಾಗೂ ಅಂತಹ ಪಾಸ್‌ಗಳನ್ನು ಮಾನ್ಯ ಮಾಡುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಯಲ್ಲಿ ಪ್ರಸ್ತುತ ಕೊರೋನಾ ನಿಯಂತ್ರಣದಲ್ಲಿದ್ದು, ಜಿಲ್ಲೆಯೊಳಗೆ ಕೊರೋನಾ ಕಂಡು ಬರುವ ಸಾಧ್ಯತೆ ಅತ್ಯಂತ ಕಡಿಮೆ ಇದೆ. ಆದರೆ ಹೊರ ಜಿಲ್ಲೆಯಿಂದ ಬರುವವರ ಮೂಲಕ ಮಾತ್ರ ವೈರಸ್ ಹರಡುವ ಸಾಧ್ಯತೆಗಳಿವೆ. ಆದುದರಿಂದ ಹೊರ ಜಿಲ್ಲೆಯಿಂದ ಬರುವ ವಾಹನಗಳು ಮತ್ತು ಪ್ರಯಾಣಿಕ ರನ್ನು ನಿರ್ಬಂಧಿಸಲಾಗಿದ್ದು, ಅತ್ಯಂತ ಗಂಭೀರ ಮತ್ತು ವೈದ್ಯಕೀಯ ಚಿಕಿತ್ಸೆಗೆ ಮಾತ್ರ ಜಿಲ್ಲೆಯ ಪ್ರವೇಶಕ್ಕೆ ಅನುಮತಿ ನೀಡಲಾಗು ವುದು ಎಂದು.

ಜಿಲ್ಲೆಯ ಜನತೆಯ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾಡಳಿತ ಕೈಗೊಂಡಿ ರುವ, ಈ ಕ್ರಮಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಅಕ್ರಮವಾಗಿ ಜಿಲ್ಲೆಯ ಒಳಗೆ ಪ್ರವೇಶ ಮಾಡಿದಲ್ಲಿ ಕಡ್ಡಾಯವಾಗಿ 14 ದಿನಗಳ ಕಾಲ ಸರಕಾರಿ ಕ್ವಾರಂಟೈನ್ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News