×
Ad

​ಅವಹೇಳನಕಾರಿ ಪೋಸ್ಟ್: ಪ್ರಕರಣ ದಾಖಲು

Update: 2020-04-12 21:17 IST

ಉಡುಪಿ, ಎ.12: ಧರ್ಮವೊಂದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ಗಳನ್ನು ಹಾಕಿದ ಆರೋಪದಡಿ ಜಯರಾಮ್ ಎಸ್. ಗೌಡ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಯರಾಮ್ ಗೌಡ ಮಾ.28ರಿಂದ ಎ.7ರವರೆಗೆ ತನ್ನ ಫೇಸ್‌ಬುಕ್ ಪೇಜ್ ನಲ್ಲಿ ಕೋಮು ಪ್ರಚೋದನಕಾರಿಯಾಗಿ ಹಾಗೂ ಅವಹೇಳನಕಾರಿಯಾಗಿ ಹಲವು ಪೋಸ್ಟ್‌ಗಳನ್ನು ಹಾಕಿದ್ದು, ಇದರಿಂದ ಕೋಮು ಭಾವನೆಗೆ ಧಕ್ಕೆಯಾಗಿದ್ದು, ಒಂದು ಸಮುದಾಯವನ್ನು ಇನ್ನೊಂದು ಸಮುದಾಯದ ವಿರುದ್ಧ ಎತ್ತಿಕಟ್ಟಿ ಕೋಮು ಗಲಭೆಗೆ ಪ್ರಚೋದನೆ ನೀಡಿ, ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿರುವುದಾಗಿ ಪಿಎಫ್‌ಐ ಶಿರೂರು ವಲಯಾಧ್ಯಕ್ಷ ಅನ್ವರ್ ಶಿರೂರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News