ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಪ್ರಕರಣ ದಾಖಲು
Update: 2020-04-12 22:44 IST
ಬಂಟ್ಚಾಳ, ಎ.12: ಪೊಲೀಸರೊಂದಿಗೆ ಅನುಚಿತ ವಾಗಿ ವರ್ತಿಸಿದ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೋಳಂತೂರು ನಿವಾಸಿ ರಫೀಕ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ರಫೀಕ್ ವಿರುದ್ಧ ಠಾಣೆಗೆ ದೂರು ಬಂದಿದ್ದು ಆ ಬಗ್ಗೆ ಪರಿಶೀಲನೆ ನಡೆಸಲು ಬೋಳಂತೂರು ರಫೀಕ್ ಮನೆಗೆ ಪೊಲೀಸರು ತೆರಳಿದಾಗ ಆತ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.