ಮನೆಯಲ್ಲೇ ಅಂಬೇಡ್ಕರ್ ಜಯಂತಿ ಆಚರಿಸಲು ದಸಂಸ ಮನವಿ

Update: 2020-04-12 18:01 GMT

ಬೆಂಗಳೂರು, ಎ. 12: ರಾಜ್ಯದಲ್ಲಿ ಕೊರೋನ ವೈರಸ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 129ನೆ ಜಯಂತಿಯನ್ನು ತಮ್ಮ ತಮ್ಮ ಮನೆಗಳಲ್ಲಿಯೇ ಆಚರಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಮನವಿ ಮಾಡಿದೆ.

ಡಾ.ಬಿ.ಆರ್.ಅಂಬೇಡ್ಕರ್ ಅವರ ಅನುಯಾಯಿಗಳು ಬುದ್ಧನ ಬೆಳಕಿನಲ್ಲಿ ಬಸವಣ್ಣನವರ ಅನುಭವ ಮಂಟಪದ ಆಶಯಗಳೊಂದಿಗೆ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ನೀಡಿರುವ ಸಂವಿಧಾನ ಶಿಲ್ಪಿ, ವಿಶ್ವಜ್ಞಾನಿ ಅಂಬೇಡ್ಕರ್ ಅವರ ಹುಟ್ಟು ಹಬ್ಬವನ್ನು ಅತ್ಯಂತ ಸಂಭ್ರಮ, ಸಡಗರದಿಂದ ತಮ್ಮ ಮನೆಗಳಲ್ಲಿಯೇ ಆಚರಿಸುವ ಮೂಲಕ ಪ್ರಜಾಪ್ರಭುತ್ವ, ಜಾತ್ಯತೀತ, ಸಾಮಾಜಿಕ ನ್ಯಾಯ, ಸಂವಿಧಾನ ರಕ್ಷಿಸಲು ಪಣ ತೊಡೋಣ ಎಂದು ಸಮಿತಿ ಕರೆ ನೀಡಿದೆ.

ಕೊರೋನ ವೈರಸ್ ಸೋಂಕು ಪ್ರಪಂಚದಾದ್ಯಂತ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಸರಕಾರಗಳು ಲಾಕ್‍ಡೌನ್ ಘೋಷಣೆ ಮಾಡಿದ್ದು, ಜನರು ಯಾವುದೇ ಕಾರಣಕ್ಕೂ ಹೊರ ಬರದೆ ಕೊರೋನ ವಿರುದ್ಧ ಸಾರ್ವಜನಿಕರು ಒಗ್ಗಟ್ಟಿನಿಂದ ನಿಂತು ಸೋಂಕಿನ ವಿರುದ್ಧದ ಹೋರಾಟಕ್ಕೆ ಸಹಕರಿಸಬೇಕು ಎಂದು ಸಮಿತಿ ರಾಜ್ಯ ಸಂಚಾಲಕ ಲಕ್ಷ್ಮಿ ನಾರಾಯಣ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News