×
Ad

ಕಲಬುರಗಿ: 2 ವರ್ಷದ ಮಗುವಿಗೆ ಸೋಂಕು

Update: 2020-04-13 17:58 IST

ಕಲಬುರಗಿ, ಎ.13: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ 2 ವರ್ಷದ ಮಗುವಿಗೆ ಕೊರೋನ ಸೋಂಕು ದೃಢಪಟ್ಟಿದೆ. ಮುಂಜಾಗ್ರತಾ ಕ್ರಮವಾಗಿ ಇಡೀ ಪಟ್ಟಣವನ್ನು ಸೀಲ್‍ಡೌನ್ ಮಾಡಲಾಗಿದೆ

ಸೀಲ್‍ಡೌನ್ ಮಾಡಿರುವುದರಿಂದ ಸ್ಥಳೀಯರಿಗೆ ಅವಶ್ಯಕ ಸಾಮಗ್ರಿಗಳನ್ನು ಮನೆ ಮನೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದ್ದು, ಪ್ರದೇಶದ ಎಲ್ಲರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಆರೋಗ್ಯ ಇಲಾಖೆ ಮುಂದಾಗಿದೆ.

ಮನೆಯಿಂದ ಜನರು ಹೊರಬಾರದಂತೆ ಕಟ್ಟುನಿಟ್ಟಿನ ಸೂಚನೆ ಹೊರಡಿಸಲಾಗಿದ್ದು, ನಿಯಮಗಳನ್ನು ಪಾಲಿಸದಿದ್ದರೆ ಕಠಿಣ ಕ್ರಮ ಜರುಗಿಸುವುದಾಗಿ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News