×
Ad

ಕೊರೋನ ವೈರಸ್ ಹಿನ್ನೆಲೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಂಧನ ತುಂಬಿಸಲು ಇಳಿದ ಹೆಲಿಕಾಪ್ಟರ್

Update: 2020-04-13 21:59 IST

ಮಂಗಳೂರು, ಎ.13: ಕೊರೋನ ನಿಗ್ರಹದ ನಿಟ್ಟಿನಲ್ಲಿ ದೇಶದ ವಿಮಾನಯಾನ ಸಚಿವಾಲಯವು ಅಂತಾರಾಷ್ಟ್ರೀಯ ಹಾಗೂ ದೇಶೀಯ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಿದ್ದರೂ ಕೂಡ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಸಂದರ್ಭ ವಿಮಾನ, ಹೆಲಿಕಾಪ್ಟರ್ ಲ್ಯಾಂಡ್ ಆಗಲು ಅವಕಾಶ ನೀಡಿದ ಮೇರೆಗೆ ಸೋಮವಾರ ಮಧ್ಯಾಹ್ನ ಗೋವಾದಿಂದ ಕೊಚ್ಚಿನ್‌ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ‌ವೊಂದು ವಿಮಾನ ನಿಲ್ದಾಣದಲ್ಲಿ ಇಂಧನ ತುಂಬಿಸಿಕೊಂಡು ಹೋಗಿವೆ.

ಏರ್‌ಪೋರ್ಟ್‌ನ ಅನುಮತಿ ಪಡೆದು ಲ್ಯಾಂಡ್ ಆದ ಹೆಲಿಕಾಪ್ಟರ್ ಸುಮಾರು ಅರ್ಧ ಗಂಟೆಗಳ ಕಾಲ ವಿಮಾನ ನಿಲ್ದಾಣದಲ್ಲಿ ನಿಂತಿತು. ಇಂಧನ ತುಂಬಿಸಿದ ಬಳಿಕ ಕೊಚ್ಚಿಗೆ ತೆರಳಿದೆ ಎಂದು ಮೂಲಗಳು ತಿಳಿಸಿವೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನಿವಾರ್ಯ ಸಂದರ್ಭದಲ್ಲಿ ಯಾವುದೇ ವಿಮಾನ, ಹೆಲಿಕಾಪ್ಟರ್‌ಗಳು ಲ್ಯಾಂಡ್ ಆಗಲು ಅವಕಾಶ ಕಲ್ಪಿಸಿದೆ. ಅದರಂತೆ ಮೊದಲ ಬಾರಿಗೆ ಹೆಲಿಕಾಪ್ಟರ್ ಇದರ ಸದುಪಯೋಗ ಪಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News