ಪಡಿತರ ವಿತರಣೆಯಲ್ಲಿ ಲೋಪ: 50 ನ್ಯಾಯಬೆಲೆ ಅಂಗಡಿಗಳು ಬಂದ್

Update: 2020-04-13 17:09 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಎ.13: ಪಡಿತರ ವಿತರಣೆಯಲ್ಲಿ ಅವ್ಯವಹಾರ ಕಂಡುಬಂದ ಹಿನ್ನೆಲೆಯಲ್ಲಿ 50 ನ್ಯಾಯಬೆಲೆ ಅಂಗಡಿಗಳನ್ನು ಅಮಾನತುಗೊಳಿಸಿ, 86 ಅಂಗಡಿಗಳಿಗೆ ಸಾರ್ವಜನಿಕ ವಿತರಣಾ ಪದ್ದತಿ ನಿಯಂತ್ರಣ ಆದೇಶದಡಿ ಕಾರಣ ಕೇಳಿ ಆಹಾರ ಇಲಾಖೆ ನೋಟಿಸ್ ನೀಡಿದೆ.

ಪಡಿತರ ವಿತರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಬಗ್ಗೆ ಇಲಾಖೆಯ ಸಹಾಯವಾಣಿ ಟೋಲ್ ಫ್ರೀ ಸಂಖ್ಯೆ 1967 ಅಥವಾ 18004259339ಗೆ ಕರೆ ಮಾಡಿ ದೂರು ದಾಖಲಿಸಬಹುದಾಗಿದೆ. ಇಲ್ಲಿಯವೆಗೂ 136 ದೂರುಗಳು ದಾಖಲಾಗಿದ್ದು, ಅದರಲ್ಲಿ 102 ದೂರುಗಳು ವಿಲೆವಾರಿಗೊಳಿಸಲಾಗಿದೆ.

ಆಹಾರ ಇಲಾಖೆಯ ಆಯುಕ್ತಾಲಯದಲ್ಲಿ ವಾರ್ ರೂಮ್ ಸ್ಥಾಪಿಸಲಾಗಿದೆ. ಇದರ ದೂ.080-22374928, 22374929ಕ್ಕೆ ಕರೆ ಮಾಡಬಹುದಾಗಿದೆ. ಇದರೊಂದಿಗೆ ಆಹಾರ ಇಲಾಖೆ ಹಾಗೂ ಲೀಗಲ್ ಮೆಟ್ರಾಲಜಿ ಅಧಿಕಾರಿಗಳನ್ನೊಳಗೊಂಡಂತೆ ತನಿಖೆಗೆ ಜಂಟಿ ತಂಡಗಳನ್ನು ರಚಿಸಲಾಗಿದೆ.

ರಾಜ್ಯದಲ್ಲಿ ಒಟ್ಟು 1,26,78,708 ಬಿಪಿಎಲ್ ಚೀಟಿಗಳಿದ್ದು, 4.31 ಕೋಟಿ ಫಲಾನುಭವಿಗಳಿದ್ದಾರೆ. ಇದರಲ್ಲಿ 1,00,34,262 ಪಡಿತರಕ್ಕೆ ಆಹಾರ ಧಾನ್ಯಗಳನ್ನು ವಿತರಿಸಲಾಗಿದೆ. ಬಳ್ಳಾರಿ, ಬೆಂಗಳೂರು ಪಶ್ಚಿಮ ವಲಯ, ಮೈಸೂರು, ಚಿಕ್ಕಬಳ್ಳಾಪುರ, ಕೊಪ್ಪಳ ಹಾಗೂ ದಾವಣಗೆರೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪಡಿತರವನ್ನು ವಿತರಣೆ ಮಾಡಲಾಗಿದೆ ಎಂದು ಆಹಾರ ಇಲಾಖೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News