ಕುಂಪಲ: 1,113 ಕುಟುಂಬಗಳಿಗೆ ಕಿಟ್ ವಿತರಣೆ
ಮಂಗಳೂರು, ಎ.13: ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ವತಿಯಿಂದ ನಾರಾಯಣ ಮೂರ್ತಿ-ಸುಧಾ ಮೂರ್ತಿ ಫೌಂಡೇಶನ್ ಮತ್ತು ಇಸ್ಕಾನ್ ಸಹಕಾರದಲ್ಲಿ ಸೋಮವಾರ ಬಾಲಕೃಷ್ಣ ಮಂದಿರದಲ್ಲಿ 1,113 ಕುಟುಂಬಗಳಿಗೆ ಆಹಾರ ಕಿಟ್ ವಿತರಿಸಲಾಯಿತು.
ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಾಲಕೃಷ್ಣ ಮಂದಿರದ ಅಧ್ಯಕ್ಷ ಸತೀಶ್ ಕುಂಪಲ, ಇನ್ಫೋಸಿಸ್ ವಲಯ ವ್ಯವಸ್ಥಾಪಕ ಹರೀಶ್ ಜೆ., ಕಾರ್ಯವಿರ್ವಹಣಾಧಿಕಾರಿ ಗೋಪಿಕೃಷ್ಣನ್, ಹಿರಿಯ ಸಹಾಯಕ ಉಪಾಧ್ಯಕ್ಷ ವಾಸುದೇವ ಕಾಮತ್, ಸಹಾಯಕ ಉಪಾಧ್ಯಕ್ಷ ಧೀರಜ್ ಹೆಜಮಾಡಿ, ಸಂಜಯ್ ಕಾಮತ್, ಪುಷ್ಪರಾಜ್, ಜಿಪಂ ಸದಸ್ಯೆ ಧನಲಕ್ಷ್ಮಿ ಗಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ರೈ ಬೋಳಿಯಾರ್, ಕ್ಷೇತ್ರಾಧ್ಯಕ್ಷ ಚಂದ್ರಹಾಸ ಪಂಡಿತ್‌ಹೌಸ್, ಚಂದ್ರಹಾಸ ಅಡ್ಯಂತಾಯ, ಹೇಮಂತ್ ಶೆಟ್ಟಿ, ಸೋಮೇಶ್ವರ ಪುರಸಭೆ ಅಧ್ಯಕ್ಷ ರಾಜೇಶ್ ಉಚ್ಚಿಲ್, ತಲಪಾಡಿ ಗ್ರಾಪಂ ಅಧ್ಯಕ್ಷ ಸುರೇಶ್ ಆಳ್ವ ಸಾಂತ್ಯಗುತ್ತು, ಮಂದಿರದ ಗೌರವಾಧ್ಯಕ್ಷ ಕೇಶವದಾಸ್ ಬಗಂಬಿಲ ಉಪಸ್ಥಿತರಿದ್ದರು.