×
Ad

ರಾಜ್ಯದಲ್ಲಿ ಕೊರೋನಗೆ ಎಂಟನೇ ಬಲಿ

Update: 2020-04-14 09:55 IST

ಬೆಂಗಳೂರು, ಎ.14: ಹೃದ್ರೋಗದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಸೋಮವಾರ ರಾತ್ರಿ ನಗರದ ರಾಜೀವ್ ಗಾಂಧಿ ಎದೆರೋಗ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊರೋನ ಸೋಂಕು ಬಾಧಿಸಿರುವುದು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್-19ಗೆ ಬಲಿಯಾದವರ ಸಂಖ್ಯೆ 8ಕ್ಕೇರಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಶ್ರೀರಾಮುಲು, ರವಿವಾರ ರಾತ್ರಿ ರಾಜೀವ್ ಗಾಂಧಿ ಎದೆರೋಗ ಆಸ್ಪತ್ರೆಗೆ ದಾಖಲಾದ 65 ವರ್ಷದ ವ್ಯಕ್ತಿಯೊಬ್ಬರು ಸೋಮವಾರ ಮೃತಪಟ್ಟಿದ್ದಾರೆ. ಅವರು ಹೃದ್ರೋಗದ ಸಮಸ್ಯೆಯಿಂದಲೂ ಬಳಲುತ್ತಿದ್ದರು. ಅವರನ್ನು ಪ್ರತ್ಯೇಕ ಚಿಕಿತ್ಸಾ ಕೇಂದ್ರದಲ್ಲಿ ದಾಖಲಿಸಿ, ಕೋವಿಡ್-19 ಪರೀಕ್ಷೆಗೆ ಒಳಪಡಿಸಿದಾಗ ವರದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮೊದಲು ಕಲಬುರಗಿಯಲ್ಲಿ ಕೊರೋನ ಸೋಂಕಿಗೆ ಒಳಗಾಗಿ ಕಲಬುರಗಿಯ ಇಎಸ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 55 ವರ್ಷದ ವ್ಯಕ್ತಿಯೊಬ್ಬರೂ ಮೃತಪಟ್ಟಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News