ದ.ಕ. ಜಿಲ್ಲಾಡಳಿತದಿಂದ ಅಂಬೇಡ್ಕರ್ ಜಯಂತಿ ಆಚರಣೆ
Update: 2020-04-14 12:12 IST
ಮಂಗಳೂರು, ಎ.14: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 129ನೇ ಜಯಂತಿಯನ್ನು
ಇಂದು ಮಂಗಳೂರು ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ದೀಪ ಬೆಳಗಿಸಿ ನಂತರ ಅಂಬೇಡ್ಕರ್ ರವರ ಬಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಜಿಪಂ ಕಾರ್ಯನಿರ್ವಹಣಾ ಅಧಿಕಾರಿ ಸೆಲ್ವಮನಿ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೊಡ್, ಉಪಾಧ್ಯಕ್ಷೆ ಕಸ್ತೂರಿ ಪಂಜ, ಎಸ್ಪಿ ಲಕ್ಷ್ಮಿ ಪ್ರಸಾದ್ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.