×
Ad

ರಾಜ್ಯದಲ್ಲಿ ಹೊಸದಾಗಿ ಬಾಲಕಿ ಸಹಿತ 11 ಮಂದಿಯಲ್ಲಿ ಕೊರೋನ ದೃಢ

Update: 2020-04-14 13:10 IST

ಬೆಂಗಳೂರು, ಎ.14: ರಾಜ್ಯದಲ್ಲಿ 10 ವರ್ಷದ ಬಾಲಕಿಯೊಬ್ಬಳ ಸಹಿತ ಮತ್ತೆ 11 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಮಧ್ಯಾಹ್ನ ಬಿಡುಗಡೆಗೊಳಿಸಿರುವ ಆರೋಗ್ಯ ಬುಲೆಟಿನಲ್ಲಿ ಸೋಮವಾ ಸಂಜೆ 5ರಿಂದ ಇಂದು ಮಧ್ಯಾಹ್ನ 12 ಗಂಟೆಯೊಳಗೆ 11 ಹೊಸ ಪ್ರಕರಣಗಳು ವರದಿಯಾಗಿರುವುದಾಗಿ ತಿಳಿಸಲಾಗಿದೆ. ಈ ಪೈಕಿ ಬೆಂಗಳೂರು ನಗರದ ಆಸ್ಪತ್ರೆಯಲ್ಲಿ ಓರ್ವ ಹಾಗೂ ವಿಜಯಪುರದ ಆಸ್ಪತ್ರೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 258ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರಲ್ಲಿ 65 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರೆ, 9 ಮಂದಿ ಮೃತಪಟ್ಟಿದ್ದಾರೆ.

ಕಳೆದ 19 ಗಂಟೆಗಳಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿರುವವರಲ್ಲಿ ಬಾಗಲಕೋಟೆ ಮತ್ತು ಕಲಬುರಗಿಯಲ್ಲಿ ತಲಾ ಮೂರು, ಬೆಂಗಳೂರು ನಗರದಲ್ಲಿ ಎರಡು ಹಾಗೂ ಚಿಕ್ಕಬಳ್ಳಾಪುರ, ವಿಜಯಪುರ ಮತ್ತು ಬೆಳಗಾವಿಯಲ್ಲಿ ತಲಾ ಒಬ್ಬರು ಸೇರಿದ್ದಾರೆ. ಈ ಪೈಕಿ ಕಲಬುರಗಿಯಲ್ಲಿ 10 ವರ್ಷದ ಬಾಲಕಿಯೊಬ್ಬಳು ಸೇರಿದ್ದಾಳೆ. ಉಳಿದಂತೆ ಮೂವರು ಮಹಿಳೆಯರು, ಏಳು ಮಂದಿ ಪುರುಷರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News