ಎ.20ರವರೆಗೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

Update: 2020-04-14 15:49 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಎ.14: ಕೊರೋನ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಹಾಗೂ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಎ.20ರ ಮಧ್ಯರಾತ್ರಿ ವರೆಗೆ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶಿಸಿದ್ದಾರೆ.

ಇಂದು ರಾತ್ರಿ (ಎ.14) 12 ಗಂಟೆಯಿಂದ ಎ.20ರ ಮಧ್ಯರಾತ್ರಿ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆ ವೇಳೆ ಎಲ್ಲಾ ಸರಕಾರಿ, ಖಾಸಗಿ ಕಚೇರಿಗಳು ಹಾಗೂ ವಾಣಿಜ್ಯ ಕೇಂದ್ರಗಳು, ಕೈಗಾರಿಕಾ ಘಟಕಗಳು, ಎಲ್ಲಾ ರೀತಿಯ ಸಾರಿಗೆ ವ್ಯವಸ್ಥೆಗಳು ಸ್ಥಗಿತಗೊಳ್ಳಲಿವೆ ಎಂದು ಆಯುಕ್ತರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News