×
Ad

ಪ್ರಧಾನಿ, ಗೃಹ ಸಚಿವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಮಂಗಳೂರಿನಲ್ಲಿ ಇಬ್ಬರ ಬಂಧನ

Update: 2020-04-14 21:46 IST

ಮಂಗಳೂರು, ಎ.15: ಕೊರೋನ ಸೋಂಕಿಗೆ ಸಂಬಂಧಿಸಿದಂತೆ ದೇಶದ ಪ್ರಧಾನ ಮಂತ್ರಿ, ಗೃಹ ಸಚಿವರು ಹಾಗೂ ಪ್ರಭಾವಿ ವ್ಯಕ್ತಿಗಳ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಅವಹೇಳನಕಾರಿ ಸಂದೇಶ ಹರಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ನಗರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಉರಿಮಜಲು ನಿವಾಸಿ ಅಬ್ದುಲ್ ಬಶೀರ್ ಯಾನೆ ನಿಸಾರ್ ಅಹಮ್ಮದ್ ಮತ್ತು ಪಣಕಜೆ ನಿವಾಸಿ ಮುಹಮ್ಮದ್ ಇಲ್ಯಾಸ್ ಬಂಧಿತ ಆರೋಪಿಗಳು.
ಇವರು ಪ್ರಧಾನಿ ಮತ್ತು ಗೃಹ ಸಚಿವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಕಿದ್ದರು ಎನ್ನಲಾಗಿದ್ದು, ಈ ಬಗ್ಗೆ ನಗರ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. 

ನಗರ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News