ಕಾಸರಗೋಡು: ಮೂರು ದಿನಗಳಲ್ಲಿ 44 ಕೊರೋನ ಸೋಂಕಿತರು ಗುಣಮುಖ
Update: 2020-04-14 21:48 IST
ಕಾಸರಗೋಡು, ಎ.14: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳ ಅವಧಿಯಲ್ಲಿ ಒಟ್ಟು 44 ಕೊರೋನ ಸೋಂಕಿತರು ಗುಣಮುಖರಾಗಿದ್ದು, ಇಂದು ಒಂದು ಪ್ರಕರಣ ಪಾಸಿಟಿವ್ ಬಂದಿದೆ. ಹೊಸ ಪ್ರಕರಣಗಳು ಕಡಿಮೆಯಾಗಿ, ಗುಣಮುಖರಾಗುವವರ ಸಂಖ್ಯೆ ಹೆಚ್ಚುತ್ತಿರುವುದು ಜಿಲ್ಲೆಯ ಮಟ್ಟಿಗೆ ಸಂತಸದ ವಿಚಾರ.
ಮಂಗಳವಾರ ಕೇರಳದಲ್ಲಿ ಎಂಟು ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಕಾಸರಗೋಡು ಜಿಲ್ಲೆಯ ಚೆಂಗಳ ನಿವಾಸಿಯಲ್ಲಿ ಸೋಂಕು ದೃಢಪಟ್ಟಿದೆ. ದುಬೈಯಿಂದ ಬಂದಿದ್ದ ಈ ವ್ಯಕ್ತಿ ಐಸೋಲೇಷನ್ ವಾರ್ಡ್ ನಲ್ಲಿದ್ದರು.
ಇದುವರೆಗೆ ಜಿಲ್ಲೆಯಲ್ಲಿ 167 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಈ ಪೈಕಿ 88 ಮಂದಿ ಮಾತ್ರ ಈಗ ಚಿಕಿತ್ಸೆಯಲ್ಲಿದ್ದಾರೆ, 79 ಮಂದಿ
ರೋಗ ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ 9,457 ಮಂದಿ ನಿಗಾದಲ್ಲಿದ್ದು, 136 ಮಂದಿ ಐಸೋಲೇಷನ್ ವಾರ್ಡ್ ನಲ್ಲಿದ್ದಾರೆ.