ಮಂಗಳೂರು: ಲಾಕ್‌ಡೌನ್ ಉಲ್ಲಂಘನೆ; 54 ವಾಹನಗಳು ಮುಟ್ಟುಗೋಲು
Update: 2020-04-14 22:18 IST
ಮಂಗಳೂರು, ಎ.14: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಲಾಕ್‌ಡೌನ್ ಉಲ್ಲಂಘನೆ ಮಾಡಿ ಸಂಚರಿಸುತ್ತಿದ್ದ 54 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಮಂಗಳವಾರ ಮುಟ್ಟುಗೋಲು ಹಾಕಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಿಗು ತಪಾಸಣೆ ನಡೆಸಲಾಗುತ್ತಿದ್ದು, ನಿಯಮ ಉಲ್ಲಂಘನೆ ಮಾಡಿದ ದ್ವಿಚಕ್ರ ವಾಹನ, ಕಾರು, ಆಟೋ ರಿಕ್ಷಾ ಸೇರಿದಂತೆ ಒಟ್ಟು 54 ವಾಹನಗಳ ಮೇಲೆ ಕೇಸು ದಾಖಲಿಸಲಾಗಿದೆ.