×
Ad

ಉಡುಪಿ: ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ

Update: 2020-04-14 22:22 IST

ಉಡುಪಿ, ಎ.14: ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಅಂಗವಾಗಿ ಮಂಗಳವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾಧಿಕಾರಿ ಜಿ.ಜಗದೀಶ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ಅನಂತರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಎಲ್ಲಾ ಹಿರಿಯ ಅಧಿಕಾರಿಗಳು ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪೆ ಮಾಡಿ, ಪುಷ್ಪಾರ್ಷನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ ಗೆಹ್ಲೋಟ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕಿರಣ್ ಫಡ್ನೇಕರ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಮೇಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News