ಗುಜರಾತ್ ಶಾಸಕರೊಬ್ಬರಿಗೆ ಕೊರೋನ ಸೋಂಕು ದೃಢ
Update: 2020-04-14 23:32 IST
ಹೊಸದಿಲ್ಲಿ, ಎ,14: ಗುಜರಾತ್ ಕಾಂಗ್ರೆಸ್ ಶಾಸಕರೊಬ್ಬರಿಗೆ ಕೊರೋನ ವೈರಸ್ ಸೋಂಕು ತಗಲಿರುವುದು ಬೆಳಕಿಗೆ ಬಂದಿದೆ. ಕಾಂಗ್ರೆಸ್ ಶಾಸಕ ಇಮ್ರಾನ್ ಖೇಡಾವಾಲಾ ಅವರಿಗೆ ಕೊರೋನ ವೈರಸ್ ಸೋಂಕು ತಗಲಿದೆ ಎಂದು ತಿಳಿದು ಬಂದಿದೆ.
ಶಾಸಕ ಇಮ್ರಾನ್ ಖೇಡಾವಾಲಾ ಅವರು ಇಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರನ್ನು ಭೇಟಿಯಾಗಿದ್ದರು. ಪತ್ರಿಕಾಗೋಷ್ಠಿಯಲ್ಲೂ ಭಾಗವಹಿಸಿದ್ದರು.