×
Ad

ಲಾಕ್ ಡೌನ್: ಹೊಸ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ ಸರಕಾರ

Update: 2020-04-15 10:45 IST

ಹೊಸದಿಲ್ಲಿ, ಎ.15: ಕೋವಿಡ್ -19 ಲಾಕ್‌ಡೌನ್ ವಿಸ್ತರಣೆಯನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಒಂದು ದಿನದ ನಂತರ ಕೇಂದ್ರ ಸರಕಾರವು ಮೇ 3 ರವರೆಗೆ ಅನುಸರಿಸಬೇಕಾದ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಪರಿಷ್ಕೃತ ಮಾರ್ಗಸೂಚಿಗಳ ಪ್ರಕಾರ ವಿಮಾನ, ರೈಲು ಮತ್ತು ರಸ್ತೆಯ ಪ್ರಯಾಣ, ಶೈಕ್ಷಣಿಕ ಮತ್ತು ತರಬೇತಿ ಸಂಸ್ಥೆಗಳ ಕಾರ್ಯಾಚರಣೆ, ಕೈಗಾರಿಕಾ ಮತ್ತು ವಾಣಿಜ್ಯ ಚಟುವಟಿಕೆಗಳು, ಆತಿಥ್ಯ ಸೇವೆಗಳು, ಸಿನೆಮಾ ಹಾಲ್‌ಗಳು ಮತ್ತು ಶಾಪಿಂಗ್ ಸಂಕೀರ್ಣಗಳು ಮುಚ್ಚಲ್ಪಟ್ಟಿರುತ್ತವೆ.

ಸಾಮಾಜಿಕ, ರಾಜಕೀಯ ಮತ್ತು ಇತರ ಚಟುವಟಿಕೆಗಳಿಗೆ ಅವಕಾಶ ಇಲ್ಲ ಮತ್ತು ಎಲ್ಲಾ ಧಾರ್ಮಿಕ ಕೇಂದ್ರಗಳ ಬಾಗಿಲು ತೆರೆಯಲು ಲಾಕ್ ಡೌನ್ ಜಾರಿಯಲ್ಲಿರುವವರೆಗೂ ಅವಕಾಶವಿಲ್ಲ.

ಕೆಲಸದ ಸ್ಥಳ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ, ಮನೆಯಲ್ಲಿ ಮಾಸ್ಕ್ ಬಳಸುವುದನ್ನು ಕಡ್ಡಾಯಗೊಳಿಸಲಾಗಿದೆ. ಪರಿಷ್ಕೃತ ಮಾರ್ಗಸೂಚಿಗಳ ಪ್ರಕಾರ ಕಚೇರಿಗಳಲ್ಲಿ ಸ್ಯಾನಿಟೈಸರ್ ಗಳು , ಪ್ರವೇಶ ನಿಯಂತ್ರಣವನ್ನು ದೃಢಪಡಿಸುವುದು, ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸುವುದು.

"ಪರಿಷ್ಕೃತ ಮಾರ್ಗಸೂಚಿಗಳ ಉದ್ದೇಶವು 1 ನೇ ಹಂತದ ಲಾಕ್‌ಡೌನ್ ಸಮಯದಲ್ಲಿ ಸಾಧಿಸಿದ ಪ್ರಗತಿಯನ್ನು ಕ್ರೂಢೀಕರಿಸುವುದು ಮತ್ತು ಕೊರೋನ ವೈರಸ್ ಸೋಂಕು ಹರಡುವಿಕೆಯನ್ನು  ತಡೆಗಟ್ಟುವುದು. ರೈತರಿಗೆ ಮತ್ತು ಕಾರ್ಮಿಕರಿಗೆ ಮತ್ತು ದೈನಂದಿನ ವೇತನ ಪಡೆಯುವವರಿಗೆ ಪರಿಹಾರವನ್ನು ಒದಗಿಸುವುದಾಗಿದೆ ಎಂದು ಸರ್ಕಾರ ತಿಳಿಸಿದೆ.

"ಪರಿಷ್ಕೃತ ಏಕೀಕೃತ ಮಾರ್ಗಸೂಚಿಗಳು ಗ್ರಾಮೀಣ ಮತ್ತು ಕೃಷಿ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಯ ದೃಷ್ಟಿಕೋನದಿಂದ ನಿರ್ಣಾಯಕವಾಗಿರುವ ಆರ್ಥಿಕತೆಯ ಆ ಕ್ಷೇತ್ರಗಳನ್ನು ನಿರ್ವಹಿಸುವ ಗುರಿಯನ್ನು ಹೊಂದಿವೆ, ಆದರೆ ದೇಶದಲ್ಲಿ ಸೋಂಕು  ಹರಡುವಿಕೆಯ ಅವಕಾಶವಿರುವ  ಸುರಕ್ಷತೆಯು ಅತ್ಯುನ್ನತವಾದ ಪ್ರದೇಶಗಳಲ್ಲಿ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೆ ತರಲಾಗುವುದು” ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News