×
Ad

ಎ.17 ರಂದು ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಕಿಟ್ ವಿತರಣೆ ಕಾರ್ಯಕ್ರಮ

Update: 2020-04-15 15:53 IST

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ನೂರು ಮಂದಿ ಅರ್ಹ ಕಲಾವಿದರು, ಸಾಹಿತಿಗಳು‌ ಹಾಗೂ ತೀರ ಬಡ ಕುಟುಂಬಕ್ಕೆ ಆಹಾರ ಸಾಮಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮ ದಿನಾಂಕ 17- 4-2020 ರಂದು ಶುಕ್ರವಾರ ಬೆಳಗ್ಗೆ 10.30 ಕ್ಕೆ ಸ್ಟೇಟ್ ಬ್ಯಾಂಕ್ ಬಳಿಯಲ್ಲಿರುವ ಅಕಾಡೆಮಿಯ ಕಚೇರಿಯಲ್ಲಿ ಜರಗಲಿದೆ.

ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಸಾಂಕೇತಿಕವಾಗಿ ಕಿಟ್ ವಿತರಿಸಲಿದ್ದಾರೆ. ಬಳಿಕ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ರವರ ಅಧ್ಯಕ್ಷತೆಯಲ್ಲಿ ಆಯ್ದ ಐದು ಮಂದಿ ಸದಸ್ಯರ ತಂಡ ಅರ್ಹ ಕುಟುಂಬಗಳ ಮನೆಗೆ ತೆರಳಿ ಕಿಟ್ ವಿತರಿಸಲಿದ್ದಾರೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News