ದಾವಣಗೆರೆ ಜಿಲ್ಲೆಯಲ್ಲಿ ಮೇ 3ರವೆರೆಗೆ ನಿಷೇಧಾಜ್ಞೆ
Update: 2020-04-15 22:42 IST
ದಾವಣಗೆರೆ, ಎ.15: ಜಿಲ್ಲೆಯಾದ್ಯಂತ ಕೊರೋನ ವೈರಸ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಎಪ್ರಿಲ್ 14 ರಿಂದ ಮೇ 3 ರವೆರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಶುಶ್ರೂಷಾ ಉದ್ದೇಶಗಳನ್ನು, ಶಾಸನಬದ್ಧ ಹಾಗೂ ನಿಯಂತ್ರಣ ಪ್ರಕಾರ್ಯಗಳನ್ನು ಹೊರತುಪಡಿಸಿ ಸಿಆರ್‍ಪಿಸಿ ಸೆಕ್ಷನ್ 144 ರನ್ವಯ 5 ವ್ಯಕ್ತಿಗಳಿಗಿಂತ ಹೆಚ್ಚಿನ ಎಲ್ಲಾ ಸಮೂಹ ಒಗ್ಗೂಡುವಿಕೆಯನ್ನು ನಿಷೇಧಿಸಲಾಗಿದೆ.
ಜೊತೆಗೆ ಎಲ್ಲಾ ಧರ್ಮಗಳ ಪ್ರಾರ್ಥನಾ ಮತ್ತು ಹಬ್ಬಗಳ ಒಗ್ಗೂಡುವಿಕೆ ಸಹ ನಿಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆದೇಶ ಉಲ್ಲಂಘಿಸಿದವರ ವಿರುದ್ಧ ಕಲಂ 188 ಮತ್ತು ವಿಪತ್ತು ನಿರ್ವಹಣಾ ಕಾಯ್ದೆ, 2005ರ ಸೆಕ್ಷನ್ 51 ರಿಂದ 60ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶಿಸಿದ್ದಾರೆ.