ಕಲಬುರಗಿ ಜಿಲ್ಲಾಸ್ಪತ್ರೆ ನೌಕರರಿಂದ ಧರಣಿ

Update: 2020-04-16 10:05 GMT

ಕಲಬುರಗಿ, ಎ.16: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ವೇತನ ಪಾವತಿ ಮತ್ತು ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರ ಮತ್ತು ನರ್ಸ್ ಗಳಿಗೆ ಸೂಕ್ತ ಕ್ವಾರೆಂಟೈನ್ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಇಂದು ಜಿಲ್ಲಾಸ್ಪತ್ರೆಯ ನೌಕರರು ಸಾಂಕೇತಿಕವಾಗಿ ಧರಣಿ ನಡೆಸಿದರು. 

ಜಿಲ್ಲೆಯಲ್ಲಿ ಕೊರೋನ ಪೀಡಿತರಿಗೆ ಚಿಕಿತ್ಸೆ ನೀಡುವ ಸಿಬ್ಬಂದಿಗೆ ಕ್ವಾರೆಂಟೈನ್ ವ್ಯವಸ್ಥೆ ಇಲ್ಲವಾಗಿದೆ.  ಇದರಿಂದ ಇಲ್ಲಿನ ಸಿಬ್ಬಂದಿ ಪ್ರತಿ ದಿನ ಮನೆಗೆ ಹೋಗುವುದು ಬರುವುದು ನಡೆಯುತ್ತಿದ್ದು, ಇದರಿಂದ ಮನೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಆಸ್ಪತ್ರೆ ನೌಕರರಿಗೆ ಪ್ರತೇಕ ಕ್ವಾರೆಂಟೈನ್ ವ್ಯವಸ್ಥೆ ಮಾಡಬೇಕೆಂದು ಈ ಸಂದರ್ಭದಲ್ಲಿ ವೈದ್ಯರೊಬ್ಬರು ಮಾತನಾಡಿ ಆಗ್ರಹಿಸಿದರು.

ಈ ವೇಳೆಯಲ್ಲಿ ಆಸ್ಪತ್ರೆಯ ನೌಕರರಾದ ಚಂದ್ರಕಾಂತ ಏರಿ ಮಾತನಾಡಿ, ಆಸ್ಪತ್ರೆಯ ಗ್ರೂಪ್ ‘ಎ’ ಯಿಂದ ‘ಡಿ’ ವರೆಗಿನ ನೌಕರರ ಮಾರ್ಚ್ ತಿಂಗಳ ವೇತನ ಪಾವತಿಯಾಗದೇ, ಕುಟುಂಬಿಕ ಜೀವನದಲ್ಲಿ ಕಷ್ಟ ಉಂಟಾಗುತ್ತಿದೆ. ಬಾಡಿಗೆ ಮನೆಯಲ್ಲಿರುವ ನೌಕರ ಸ್ಥಿತಿ ಆತಂಕಕ್ಕೆ ಸಿಲುಕಿ, ಜೀವನ ನಡೆಸುವುದು ಕಷ್ಟವಾಗುತ್ತಿದೆ. ಆದ್ದರಿಂದ ಕೂಡಲೇ ಬಾಕಿ ವೇತನ ಪಾವತಿಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಧರಣಿಯಲ್ಲಿ ಜಿಲ್ಲಾ ಆಸ್ಪತ್ರೆಯ ವೈದ್ಯರು ಸೇರಿದಂತೆ ಸಿಬ್ಬಂದಿ ಜಿಲ್ಲಾ ಆಸ್ಪತ್ರೆಯ ನಿರ್ದೇಶಕರಿಗೆ ಮನವಿ ಮಾಡಿ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News