×
Ad

ಅನಿವಾಸಿ ಕನ್ನಡಿಗರ ಸುರಕ್ಷತೆಗೆ ಕ್ರಮಕೈಗೊಳ್ಳಿ: ಮುಖ್ಯಮಂತ್ರಿಗೆ ಪತ್ರ ಬರೆದ ಮಾಣಿ ಉಸ್ತಾದ್

Update: 2020-04-16 19:41 IST

ಬಂಟ್ವಾಳ: ವಿದೇಶಗಳಲ್ಲಿ ಲಾಕ್‌ಡೌನ್ ಗಳಲ್ಲಿ ಸಿಲುಕಿಕೊಂಡು ಇತ್ತ ತಾಯ್ನಾಡಿಗೂ ಮರಳಲಾಗದೇ, ಉದ್ಯೋಗವನ್ನೂ ಕಳೆದುಕೊಂಡು ಸಂಕಷ್ಟದಲ್ಲಿರುವ ಅನಿವಾಸಿ ಕನ್ನಡಿಗರ ಸುರಕ್ಷತೆಗಾಗಿ ಕೇಂದ್ರದೊಂದಿಗೆ ಸಮಾಲೋಚಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಉಲಮಾ ಒಕ್ಕೂಟದ ಪ್ರ‌‌.ಕಾರ್ಯದರ್ಶಿ ಝೈನುಲ್ ಉಲಮಾ ಮಾಣಿ ಅಬ್ದುಲ್ ಹಮೀದ್ ಮುಸ್ಲಿಯಾರ್ ರಾಜ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರಿಗೆ ಇಮೇಲ್ ಮೂಲಕ ಪತ್ರ ಬರೆದಿದ್ದಾರೆ.

ಈಗಾಗಲೇ ಕೆಲವು ರಾಷ್ಟ್ರಗಳು ಇತರ ರಾಷ್ಟ್ರಗಳ ಪ್ರಜೆಗಳನ್ನು ಕರೆಸಿಕೊಳ್ಳುವಂತೆ ಕೇಳಿಕೊಂಡಿರುವ ಬಗ್ಗೆ ವರದಿಯಾಗಿರುವ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಅನಿವಾಸಿ ಕನ್ನಡಿಗರ ನೆರವಿಗೆ ರಾಜ್ಯ ಸರಕಾರವು ಮುಂದಾಗಬೇಕೆಂದು ಪತ್ರದಲ್ಲಿ ಸಿಎಂಗೆ ಮನವಿ ಸಲ್ಲಿಸಿದ್ದಾರೆ‌. ತನ್ನ ಸಾರಥ್ಯದಲ್ಲಿ ಕಾರ್ಯಾಚರಿಸುತ್ತಿರುವ ಮಾಣಿ ದಾರುಲ್ ಇರ್ಶಾದ್ ವಿದ್ಯಾಸಂಸ್ಥೆಯ ಕಟ್ಟಡ ಸಮುಚ್ಚಯಗಳನ್ನು ತಾಯ್ನಾಡಿಗೆ ಮರಳುವ ಅನಿವಾಸಿ ಕನ್ನಡಿಗರಿಗೆ ಕ್ವಾರಂಟೈನ್ ಕೇಂದ್ರವಾಗಿ ನೀಡಲು ಸಿದ್ಧ ಎಂದೂ ಪತ್ರದಲ್ಲಿ ಮಾಣಿ ಉಸ್ತಾದ್ ಉಲ್ಲೇಖಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News