×
Ad

ಚಾಮರಾಜನಗರ: ಮತ್ತೆ 42 ಜನರು ಕ್ವಾರೆಂಟೈನ್‍ಗೆ ದಾಖಲು

Update: 2020-04-16 20:03 IST

ಚಾಮರಾಜನಗರ, ಏಪ್ರಿಲ್. 16: ಜುಬಿಲಿಯೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತಿದ್ದ ಜಿಲ್ಲೆಯ 52 ವ್ಯಕ್ತಿಗಳು 14 ದಿನಗಳ ಕ್ವಾರೆಂಟೈನ್ ಅವಧಿಯನ್ನು ಪೂರ್ಣಗೊಳಿಸಿದ ಬಳಿಕ ಬಿಡುಗಡೆಗೊಂಡಿದ್ದರು. ಈ ಪೈಕಿ ಮತ್ತೆ 42 ಜನರನ್ನು ಮುಂಜಾಗ್ರತಾ ಕ್ರಮವಾಗಿ ಪುನಃ ಕ್ವಾರೆಂಟೈನ್ ಕೇಂದ್ರದಲ್ಲಿ ದಾಖಲಿಸಿಕೊಂಡು ಈ ಎಲ್ಲರ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದ್ದು, ಫಲಿತಾಂಶ ನಿರೀಕ್ಷಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ತಿಳಿಸಿದ್ದಾರೆ.

ಜುಬಿಲಿಯೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತಿದ್ದ ಜಿಲ್ಲೆಯ 52 ವ್ಯಕ್ತಿಗಳ ಪೈಕಿ ಈಗಾಗಲೇ 5 ಜನರ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪರೀಕ್ಷಿಸಲಾಗಿದ್ದು, ಪರೀಕ್ಷೆಯ ಫಲಿತಾಂಶ ನೆಗೆಟಿವ್ ಎಂದು ಬಂದಿರುತ್ತದೆ. ಉಳಿದ 47 ಜನರಲ್ಲಿ 42 ಜನರನ್ನು ಪುನಃ ಕ್ವಾರೆಂಟೈನ್ ಕೇಂದ್ರದಲ್ಲಿ ದಾಖಲಿಸಿಕೊಂಡು ಈ ಎಲ್ಲರ ಮಾದರಿಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ. ಉಳಿದ 5 ಜನರನ್ನು ಕ್ವಾರೆಂಟೈನ್ ಕೇಂದ್ರಕ್ಕೆ ಕರೆಸಲು ಕ್ರಮ ವಹಿಸಲಾಗಿದೆ.

ಐ.ಎಲ್.ಐ ರೋಗಲಕ್ಷಣ ಇದ್ದ ಒರ್ವ ವ್ಯಕ್ತಿಯ ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆಗಾಗಿ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದ್ದು, ಫಲಿತಾಂಶ ನಿರೀಕ್ಷಿಸಲಾಗುತ್ತಿದೆ. ಈ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News