×
Ad

ಕೇತಗಾನಹಳ್ಳಿಯಲ್ಲಿ ನಾಳೆ ನಿಖಿಲ್ ವಿವಾಹ: ಕುಮಾರಸ್ವಾಮಿ

Update: 2020-04-16 20:05 IST

ಬೆಂಗಳೂರು, ಎ. 16: ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಅವರ ವಿವಾಹ ನಾಳೆ(ಎ.17) ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ನಡೆಯಲಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನ ವೈರಸ್ ಸೋಂಕಿನಿಂದ ಆಗಿರುವ ಲಾಕ್‍ಡೌನ್ ಹಿನ್ನೆಲೆಯಲ್ಲಿ ಬಂಧುಗಳು, ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸೇರಿದಂತೆ ತಾವೆಲ್ಲರೂ ತಾವಿದ್ದ ಸ್ಥಳದಿಂದಲೇ ನೂತನ ವಧು-ವರರನ್ನು ಆಶೀರ್ವಾದ ಮಾಡಬೇಕು ಎಂದು ವಿನಂತಿಸಿದರು.

ಕೊರೋನ ವೈರಸ್ ಸೋಂಕು ಮರೆಯಾದ ಬಳಿಕ ದಂಪತಿ ನಿಮ್ಮ ಮುಂದೆ ಬರಲಿದ್ದಾರೆ. ದಯಮಾಡಿ ತಾವು ಅಭಿಮಾನದಿಂದ ಮದುವೆಗೆ ಬಂದು ನಿಮ್ಮಿಂದ ಸಮಾಜಕ್ಕೆ ತಪ್ಪು ಸಂದೇಶ ಹೋಗುವುದು ಬೇಡ. ಆರೋಗ್ಯವಂತ ಸಮಾಜ ನಿರ್ಮಿಸೋಣ ಎಂದು ಕುಮಾರಸ್ವಾಮಿ ಕೋರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News