ಶಿರ್ವದ ಫಾ.ಮಹೇಶ್ ಡಿಸೋಜ ಆತ್ಮಹತ್ಯೆ ಪ್ರಕರಣ: ಆರೋಪಿ ಗ್ರಾ.ಪಂ. ಅಧ್ಯಕ್ಷರಿಗೆ ಹೈಕೋರ್ಟ್ ಜಾಮೀನು
ಬೆಂಗಳೂರು, ಎ.16: ಶಿರ್ವ ಚರ್ಚ್‍ನ ಸಹಾಯಕ ಧರ್ಮಗುರು ಹಾಗೂ ಶಿರ್ವ ಡೋನ್ ಬೊಸ್ಕೊ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಫಾ.ಮಹೇಶ್ ಡಿಸೋಜಾ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಬಂಧಿತನಾಗಿರುವ ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಡೇವಿಡ್ ಡಿಸೋಜ(49)ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಡೇವಿಡ್ ಡಿಸೋಜಾ ಅವರನ್ನು ಶಿರ್ವ ಚರ್ಚ್‍ನ ಸಹಾಯಕ ಧರ್ಮಗುರು ಫಾ.ಮಹೇಶ್ ಡಿಸೋಜಾ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಂಬ ಆರೋಪದಡಿ ಬಂಧಿಸಲಾಗಿತ್ತು.
ಡೇವಿಡ್ ಡಿಸೋಜಾನ ಪತ್ನಿ ಜೊತೆ ಫಾ.ಮಹೇಶ್ ಡಿಸೋಜಾ ನಿರಂತರ ಫೋನ್ ಸಂಭಾಷಣೆ, ಮೊಬೈಲ್ ಚಾಟಿಂಗ್ ನಡೆಸುತ್ತಿದ್ದರು ಎನ್ನಲಾಗಿದ್ದು, ಇದನ್ನು ತನ್ನ ಪತ್ನಿಯ ಮೊಬೈಲ್ ನೋಡಿ ತಿಳಿದ ಡೇವಿಡ್ ಫೋನ್‍ನಲ್ಲಿ ಫಾ.ಮಹೇಶ್‍ರಿಗೆ ಬೆದರಿಕೆ ಹಾಕಿದ್ದ. ಇದು ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ದೃಢಪಟ್ಟ ಆರೋಪದಡಿ ತನಿಖಾಧಿಕಾರಿ ಉಡುಪಿಯ ಕಾಪು ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್ ಆರೋಪಿ ಡೇವಿಡ್ ಡಿಸೋಜಾನನ್ನು ಬಂಧಿಸಿದ್ದರು.
ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಆರೋಪಿ ಪರ ಹೈಕೋರ್ಟ್‍ನ ವಕೀಲ ಅರುಣ್ ಶ್ಯಾಮ್ ವಾದಿಸಿದ್ದರು.