ಬೆಳಗಾವಿ ಜಿಲ್ಲೆಯಲ್ಲಿ ಒಂದೇ ದಿನ 17 ಮಂದಿಗೆ ಕೊರೋನ ದೃಢ
Update: 2020-04-16 20:52 IST
ಬೆಳಗಾವಿ, ಎ.16: ಬೆಳಗಾವಿ ಜಿಲ್ಲೆಯಲ್ಲಿ ಒಂದೇ ದಿನಕ್ಕೆ ಹೊಸದಾಗಿ 17 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ.
ಹಿರೇಬಾಗೇವಾಡಿಯ 8, ರಾಯಬಾಗ ತಾಲೂಕಿನ ಕುಡಚಿಯ 7, ಚಿಕ್ಕೋಡಿ ಹಾಗೂ ಬೆಳಗಾವಿ ನಗರದ ತಲಾ ಒಬ್ಬರಿಗೆ ಕೊರೋನ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೊರೋನ ಸೋಂಕು ತೀವ್ರವಾಗಿ ವ್ಯಾಪಿಸುತ್ತಿರುವುದು ಆತಂಕ ಸೃಷ್ಟಿಸಿದ್ದು, ಸೋಂಕಿತರಿಗೆ ಬಿಮ್ಸ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.