×
Ad

ಕೊರೋನ: 36 ಹೊಸ ಪ್ರಕರಣಗಳೊಂದಿಗೆ ರಾಜ್ಯದಲ್ಲಿ 315ಕ್ಕೆ ಏರಿದ ಸೋಂಕಿತರ ಸಂಖ್ಯೆ

Update: 2020-04-16 21:22 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಎ.17: ರಾಜ್ಯದಲ್ಲಿ ಗುರುವಾರ ಒಂದೇ ದಿನ 36 ಹೊಸ ಪ್ರಕರಣಗಳು ವರದಿಯಾಗಿದ್ದು, ಮೊಟ್ಟ ಮೊದಲ ಕೊರೋನ ಪ್ರಕರಣ ವರದಿಯಾದಾಗಿನಿಂದಲೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗಿರಲಿಲ್ಲ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 315ಕ್ಕೆ ಹೆಚ್ಚಳವಾಗಿದೆ.

ರಾಜ್ಯದಲ್ಲಿ ಕೋವಿಡ್ 19 ಪೀಡಿತ ಒಟ್ಟು ವ್ಯಕ್ತಿಗಳಲ್ಲಿ ಇದುವರೆಗೂ 13 ಜನರು ಮರಣ ಹೊಂದಿದ್ದು, 82 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದ 220 ಜನರ ಪೈಕಿ 218 ರೋಗಿಗಳು ಗೊತ್ತುಪಡಿಸಿದ ಆಸ್ಪತ್ರೆಗಳ ಪ್ರತ್ಯೇಕ ವಾರ್ಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರ ಆರೋಗ್ಯವು ಸ್ಥಿರವಾಗಿರುತ್ತದೆ.

ಸೋಂಕಿತರ ಪೈಕಿ 17 ಪಾಸಿಟಿವ್ ಪ್ರಕರಣಗಳು ಬೆಳಗಾವಿ ಜಿಲ್ಲೆಯಿಂದಲೇ ವರದಿಯಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News